Ad imageAd image

ಭರ್ಜರಿ ಮುನ್ನಡೆ ಸಾಧಿಸಿದ ರಾಹುಲ್ ಗಾಂಧಿ 

Bharath Vaibhav
RAHUL GANDHI
WhatsApp Group Join Now
Telegram Group Join Now

ಬೆಂಗಳೂರು : ದೇಶಾದ್ಯಂತ ಸುಧೀರ್ಘ ಏಳು ಹಂತಗಳಲ್ಲಿ ನಡೆದ ಲೋಕಸಭೆ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದೆ. ಇಂದು ಬೆಳಗ್ಗೆ 8 ಗಂಟೆಯಿಂದ 543 ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಆರಂಭವಾಗಿದ್ದು, 8,360 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.

ರಾಯ್‌ಬರೇಲಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭರ್ಜರಿ ಮುನ್ನಡೆ ಸಾಧಿಸಿದ್ದು, 18 ಸಾವಿರ ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.ಬಿಜೆಪಿ ಅಭ್ಯರ್ಥಿಗೆ ರಾಹುಲ್ ಗಾಂಧಿ ವಿರುದ್ಧ ಹಿನ್ನಡೆಯಾಗಿದೆ.

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಬಿಜೆಪಿ ಅಭ್ಯರ್ಥಿ ಯದುವೀರ್​ಗೆ 1,64,337 ಮತಗಳನ್ನು ಪಡೆದ್ರೆ. ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ 128,870 ಮತಗಳನ್ನು ಪಡೆದಿದ್ದು ಯದುವೀರ್ 35467 ಮತಗಳ ಮುನ್ನಡೆ ಸಾಧಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ಅವರು 141,752 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ 91,286 ಮತಗಳನ್ನು ಪಡೆದಿದ್ದು 50,466 ಮತಗಳ ಅಂತರದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.

ಈವರೆಗೆ ನಡೆದ ಮತ ಎಣಿಕೆಯಲ್ಲಿ ಎನ್‌ಡಿಎ 282 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ರೆ, ಇಂಡಿಯಾ ಒಕ್ಕೂಟಕ್ಕೆ 226 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಹಾಗೆಯೇ ಸ್ವತಂತ್ರ ಅಭ್ಯರ್ಥಿಗಳು 25 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಕರ್ನಾಟಕದ 15 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ರೆ ಕಾಂಗ್ರೆಸ್‌ ಆರು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

 

 

WhatsApp Group Join Now
Telegram Group Join Now
Share This Article
error: Content is protected !!