ಬೆಂಗಳೂರು: ರ‍್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನರ‍್ಧೇಶಕ ಸ್ಥಾನಕ್ಕೆ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಪ್ರತಿನಿಧಿಯಾಗಿ ರಾಹುಲ್ ಸತೀಶ್ ಜಾರಕಿಹೊಳಿ ಅವರು ಆಯ್ಕೆಯಾಗಿದ್ದಾರೆ.
ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅಪೆಕ್ಸ್ ಬ್ಯಾಂಕ್ ಮುಖ್ಯ ಕಚೇರಿಯಲ್ಲಿ ರಾಹುಲ್ ಜಾರಕಿಹೊಳಿ ಅವರು ಚುನಾವಣಾಧಿಕಾರಿಗಳಿಗೆ ಅಧಿಕೃತವಾಗಿ ತಮ್ಮ ನಾಮಪತ್ರವನ್ನು ಸಲ್ಲಿಸಿದರು.
ಈ ಸಂರ‍್ಭದಲ್ಲಿ ರಾಜ್ಯದ ಹಿರಿಯ ನಾಯಕರು ಹಾಗೂ ಪ್ರಮುಖ ಗಣ್ಯರು ಹಾಜರಿದ್ದು, ರಾಹುಲ್ ಅವರಿಗೆ ಶುಭ ಹಾರೈಸಿದರು.
ನಾಮಪತ್ರ ಸಲ್ಲಿಕೆಯ ವೇಳೆ ಮಾಜಿ ಸಚಿವರಾದ ಕೆ. ರಾಜಣ್ಣ, ಮಾಜಿ ಸಚಿವರಾದ ವೀರಕುಮಾರ್ ಪಾಟೀಲ್, ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಲಕ್ಷö್ಮಣರಾವ್ ಚಿಂಗಳೆ ಇತರ ಗಣ್ಯರು ಇದ್ದರು.
ಅಪೆಕ್ಸ್ ಬ್ಯಾಂಕ್ ನರ‍್ಧೇಶಕ ಸ್ಥಾನಕ್ಕೆ ರಾಹುಲ್ ಜಾರಕಿಹೊಳಿ ನಾಮಪತ್ರ




