Ad imageAd image

ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಕ್ರಮವಹಿಸಿ : ಜಿಪಂ ಸಿಇಒ ರಾಹುಲ್ ಶಿಂಧೆ

Bharath Vaibhav
ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಕ್ರಮವಹಿಸಿ : ಜಿಪಂ ಸಿಇಒ ರಾಹುಲ್ ಶಿಂಧೆ
WhatsApp Group Join Now
Telegram Group Join Now

ಬೆಳಗಾವಿ: ತೀವ್ರ ಬೇಸಿಗೆಯ ಈ ಸಂದರ್ಭದಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಲು  ಜಲ ಜೀವನ ಮಿಷನ್  ಯೋಜನೆಯಡಿ ಕುಡಿಯುವ ನೀರಿನ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಕಾರ್ಯಪಾಲಕ ಅಭಿಯಂತರರು ಬೆಳಗಾವಿ/ಚಿಕ್ಕೋಡಿ ರವರಿಗೆ ಜಿ.ಪಂ. ಸಿಓ ರಾಹುಲ್ ಶಿಂಧೆ ಅವರು ಸೂಚನೆ ನೀಡಿದರು.

ನಗರದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜರುಗಿದ  ಜಲ ಜೀವನ ಮಿಷನ್ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಎಲ್ಲ ತಾಲೂಕಿನ ಸಹಾಯಕ ಕಾರ್ಯಪಾಲಕ ಅಭಿಯಂತರರು ಹಾಗೂ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳು ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಬಹುದಾಂತಹ ಗ್ರಾಮಗಳನ್ನು ಜಂಟಿಯಾಗಿ ಗುರುತಿಸಿ, ಪರಿಹಾರವನ್ನು ಕಂಡುಕೊಳ್ಳಲು ಹಾಗೂ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ತೊಂದರೆ ಉಂಟಾಗದಂತೆ ನಿಗಾವಹಿಸುವಂತೆ ನಿರ್ದೇಶನ ನೀಡಿದರು.

 

 ಏಪ್ರೀಲ್ ಮತ್ತು ಮೇ ತಿಂಗಳುಗಳಲ್ಲಿ ಬಹುಗ್ರಾಮ ಯೋಜನೆಯ ಕುಡಿಯುವ ನೀರಿನ ಮೂಲಗಳು ಭತ್ತಿಹೊದಲ್ಲಿ ಸಮೀಪವಿರುವ ಖಾಸಗಿ ಬೋರವೆಲ್ ಗಳನ್ನು ಹೈಯರ್ ತೆಗೆದುಕೊಂಡು ಕುಡಿಯುವ ನೀರಿನ ಸಮರ್ಪಕ ನಿರ್ವಹಣೆ ಮಾಡಲು ಸಭೆಗೆ ತಿಳಿಸಿದರು. ಮತ್ತು ಗ್ರಾಮ ಪಂಚಾಯಿತಿಗಳಲ್ಲಿ ನೀರು ಮತ್ತು ನೈರ್ಮಲ್ಯ  ಸಮಿತಿಯನ್ನು ಯಾವ ರೀತಿ ಮಾಡಬೇಕು ಮತ್ತು ಸಭೆಯ ನಡಾವಳಿಗಳನ್ನು ಸಲ್ಲಿಸಲು ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ ಯೋಜನಾ ನಿರ್ದೇಶಕರು ರವಿ ಬಂಗಾರೆಪ್ಪನವರ, ಮುಖ್ಯ ಲೆಕ್ಕಾಧಿಕಾರಿ ಪರಶುರಾಮ್ ದುಡಗುಂಟಿ, ಉಪಕಾರ್ಯದರ್ಶಿ(ಆಡಳಿತ) ಬಸವರಾಜ್ ಹೆಗ್ಗನಾಯಕ್, ಕಾರ್ಯಪಾಲಕ ಅಭಿಯಂತರರು ಶಶಿಕಾಂತ ನಾಯಿಕ ಬೆಳಗಾವಿ ವಿಭಾಗ, ಕಾರ್ಯಪಾಲಕ ಅಭಿಯಂತರರು ಪಾಂಡುರಂಗರಾವ್ ಚಿಕ್ಕೋಡಿ ವಿಭಾಗ ಎಲ್ಲ ತಾಲೂಕಿನ ಸಹಾಯಕ ಕಾರ್ಯಪಾಲಕ ಅಭಿಯಂತರರು, ಜಿಲ್ಲೆಯ ಎಲ್ಲ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಎಲ್ಲ  ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಹಾಗೂ ಜಿಲ್ಲಾ ಯೋಜನಾ ವ್ಯವಸ್ಥಾಪಕರು ಜಿಲ್ಲೆಯ ಎಲ್ಲಾ ಇಂಜಿನಿಯರ್ ಗಳು ಮತ್ತು ನೀರು ಪರೀಕ್ಷಾ ಪ್ರಯೋಗಾಲಯದ   ಸಿಬ್ಬಂದಿಗಳು ವಿಡಿಯೋ ಸಂವಾದದಲ್ಲಿ ಹಾಜರಿದ್ದರು.

WhatsApp Group Join Now
Telegram Group Join Now
Share This Article
error: Content is protected !!