Ad imageAd image

ಮಳೆ, ಪ್ರವಾಹ ಸ್ಥಿತಿಗತಿ ಪರಿಶೀಲನೆ ಮಾಡಿದ ಜಿಪಂ ಸಿಇಒ ರಾಹುಲ್ ಶಿಂಧೆ

Bharath Vaibhav
ಮಳೆ, ಪ್ರವಾಹ ಸ್ಥಿತಿಗತಿ ಪರಿಶೀಲನೆ ಮಾಡಿದ ಜಿಪಂ ಸಿಇಒ ರಾಹುಲ್ ಶಿಂಧೆ
WhatsApp Group Join Now
Telegram Group Join Now

ಬೆಳಗಾವಿ: ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ಶಿಂಧೆ ರವರು ಇಂದು ಖಾನಾಪೂರ ತಾಲೂಕಿನ ವಿವಿಧೆಡೆ ಭೇಟಿ ನೀಡಿ, ಮಳೆ ಹಾಗೂ ಪ್ರವಾಹದ ಸ್ಥಿತಿಗತಿಯನ್ನು ಅವಲೋಕಿಸಿದರು.

ತಾಲೂಕಿನ ಇದ್ದಲಹೊಂಡ ಗ್ರಾಪಂ ವ್ಯಾಪ್ತಿಯ ಇದ್ದಲಹೊಂಡ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, ಶಾಲೆಯ ಮೂಲಭೂತ ಸೌಕರ್ಯಗಳು, ಶಿಕ್ಚಕರು, ಮಕ್ಕಳ ಹಾಜರಾತಿಯ ಕುರಿತು ಮಾಹಿತಿ ಪಡೆದರು.

ಹಾಲಾತ್ರಿ ಹಳ್ಳದ ಪ್ರವಾಹ ಪರಿಸ್ಥಿತಿ ಪರಿಶೀಲನೆ: ನಂತರ ಖಾನಾಪೂರ-ಗೋವಾ ರಸ್ತೆಯಲ್ಲಿರುವ ಹಾಲಾತ್ರಿ ಹಳ್ಳದ ಪ್ರವಾಹ ಸ್ಥಿತಿಗತಿ ಹಾಗೂ ಸೇತುವೆಯನ್ನು ವೀಕ್ಷಿಸಿ ಗ್ರಾಪಂ, ತಾಪಂ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಹಳ್ಳದ ಸೇತುವೆಗೆ ಹೊಂದಿಕೊಂಡು ನೀರಿನಲ್ಲಿ ಬಿದ್ದಿರುವ ಮರದ ಕೊಂಬೆಗಳನ್ನು ತೆರವುಗೊಳಿಸುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಪಾಂಡರಿ ನದಿ ಪ್ರವಾಹದ ಸ್ಥಿತಿಗತಿ ಚರ್ಚೆ: ಲೋಂಡಾ ಗ್ರಾಪಂ ಕಾರ್ಯಾಲಯಕ್ಕೆ ಭೇಟಿ ನೀಡಿ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ಮಾಡಿದರು.

ಪಾಂಡರಿ ನದಿ ಪ್ರವಾಹದಿಂದ ಮುಳುಗಡೆಯಾಗುವ ಲೋಂಡಾ ಗ್ರಾಪಂ ವ್ಯಾಪ್ತಿಯ ಗಾಂಧಿನಗರದ ನಿವಾಸಿಗಳೊಂದಿಗೆ ಚರ್ಚಿಸಿ, ಪ್ರವಾಹ ಪರಿಸ್ಥಿತಿಯ ಮಾಹಿತಿ ಪಡೆದರು. ಪ್ರವಾಹ ಎದುರಿಸಲು ಕೈಗೊಂಡಿರುವ ಕ್ರಮಗಳ ಕುರಿತು ಗ್ರಾಪಂ, ತಾಪಂ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ಶಾಲೆ- ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ:
ಲೋಂಡಾ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, ಶಾಲಾ ಕಟ್ಟಡ ಹಾಗೂ ಮಕ್ಕಳ ಹಾಜರಾತಿಯನ್ನು ಪರಿಶೀಲಿಸಿದರು.

ವಿದ್ಯುತ್ ಸಂಪರ್ಕ ಕಡಿತದಿಂದ ಮಕ್ಕಳಿಗೆ ತೊಂದರೆಯಾಗದಂತೆ ಶಾಲೆಯ ಎಲ್ಲ ಕೊಠಡಿಗಳಿಗೆ ಚಾರ್ಜಿಂಗ್ ಬಲ್ಬ್ ಅಥವಾ ಸೋಲಾರ ಮೂಲಕ ವಿದ್ಯುತ್ ಸಂಪರ್ಕದ ವ್ಯವಸ್ಥೆ ಕಲ್ಪಿಸುವಂತೆ ಗ್ರಾಪಂ ಅಭಿವೃದ್ಧಿ ಅಧಿಕಾರಿಗೆ ಸೂಚನೆ ನೀಡಿದರು.

ನಂತರ ಲೋಂಡಾ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ವೈದ್ಯರು ಹಾಗೂ ಸಿಬ್ಬಂದಿಯ ಹಾಜರಾತಿಯನ್ನು ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಜಿಪಂ ಮುಖ್ಯ ಯೋಜನಾಧಿಕಾರಿ ಗಂಗಾಧರ ದಿವಟರ್, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಲೀಲಾವತಿ ಹಿರೇಮಠ, ಅಕ್ಷರ ದಾಸೋಹ ಜಿಲ್ಲಾ ಶಿಕ್ಷಣ ಅಧಿಕಾರಿ ಎಲ್.ವಿ. ಯಕ್ಕುಂಡಿ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ರಮೇಶ ಮೇತ್ರಿ, ತಹಶೀಲ್ದಾರ್ ದುಂಡಪ್ಪ ಕೋಮಾರ, ಪಂಚಾಯತರಾಜ್ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ರಾಜೇಂದ್ರ ಜಾಧವ, ಬಿಇಓ ರಾಮಪ್ಪ, ತಾಪಂ ಸಹಾಯಕ ನಿರ್ದೇಶಕಿ (ಗ್ರಾಉ) ರೂಪಾಲಿ ಬಡಕುಂದ್ರಿ, ಸಹಾಯಕ ನಿರ್ದೇಶಕ (ಪಂರಾ) ವಿಜಯ ಕೋತಿನ್ ಸೇರಿ ವಿವಿಧ ಇಲಾಖೆಯ ತಾಲೂಕಾಮಟ್ಟದ ಅಧಿಕಾರಿಗಳು, ಸಿಬ್ಬಂದಿ, ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು, ಅಧ್ಯಕ್ಷರು, ಸದಸ್ಯರು, ಸಿಬ್ಬಂದಿ ಹಾಗೂ ಗ್ರಾಮಸ್ಥರು ಹಾಜರಿದ್ದರು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!