ಬೆಳಗಾವಿ: ರಾಮದುರ್ಗ ತಾಲೂಕಿನ ವಿವಿಧ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿಯ ಕಾಮಗಾರಿಗಳ ಸ್ಥಳಗಳಿಗೆ ಮಂಗಳವಾರ ಭೇಟಿ ನೀಡಿದ ಜಿಪಂ ಸಿಇಒ ರಾಹುಲ್ ಶಿಂಧೆ ಅವರು ಪರಿಶೀಲಿಸಿದರು.
ರಾಮದುರ್ಗ ತಾಲೂಕಿನ ಹಿರೇಕೊಪ್ಪ ಕೆ.ಎಸ್. ಗ್ರಾಪಂಗೆ ಭೇಟಿ ನೀಡಿ ಅವರು ಮನರೇಗಾ ಯೋಜನೆಯಡಿ ಕೈಗೊಂಡಿದ್ದ ಕಾಲುವೆ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ಕೆಲಸ ಮಾಡುತ್ತಿದ್ದ ಕೂಲಿಕಾರರನ್ನು ಭೇಟಿ ಮಾಡಿ ಕೂಲಿ ಜಮೆ ಹಾಗೂ ಇತರೆ ಕುಂದು ಕೊರತೆಗಳನ್ನು ಆಲಿಸಿದರು. ಬಳಿಕ ಗ್ರಾಪಂ ಸದಸ್ಯರೊಂದಿಗೆ ಸಭೆ ನಡೆಸಿದರು. ಗ್ರಾಮ ಪಂಚಾಯತಿ ಸಿಬ್ಬಂದಿಯ ಹಾಜರಾತಿ, ಇ ಸ್ವತ್ತು ಹಾಗೂ ತೆರಿಗೆ ವಸೂಲಾತಿ ಅಲ್ಲದೇ ವಿವಿಧ ಯೋಜನೆಗಳ ಕುರಿತು ಪ್ರಗತಿ ಪರಿಶೀಲಿಸಿದರು.
ಕೆ.ಚಂದರಗಿ ಗ್ರಾಪಂ ವ್ಯಾಪ್ತಿಯ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿದ ಜಿಪಂ ಸಿಇಒ ಅವರು ಮಕ್ಕಳಿಗೆ ವಿತರಿಸುವ ಪೌಷ್ಟಿಕ ಆಹಾರ ಮಕ್ಕಳ ಸಂಖ್ಯೆ ಹಾಗೂ ಅಡುಗೆ ಮನೆ ಕುರಿತು ಪರಿಶೀಲನೆ ನಡೆಸಿದರು. ಅದೇ ರೀತಿ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಮಕ್ಕಳ ಬಿಸಿ ಊಟ ಮಾಡುತ್ತಿರುವುದನ್ನು ಪರಿಶೀಲನೆ ಮಾಡಿದರು. ತದನಂತರ ಘನ ತ್ಯಾಜ್ಯ ವಿಲೇವಾರಿ ಘಟಕ ವೀಕ್ಷಿಸಿದರು.
ಸುನ್ನಾಳ, ಹಿರೇಕೊಪ್ಪ ಕೆ.ಎಸ್. ಹಾಗೂ ಕಟಕೋಳ ಗ್ರಾಪಂ ವ್ಯಾಪ್ತಿಯಡಿ ನಿರ್ಮಿಸಿರುವ ಯು.ಎಚ್.ಟಿ. ನೀರಿನ್ ಟ್ಯಾಂಕ್ ಮತ್ತು ಜಾಕ್ವಾಲ್ ಪರಿಶೀಲಿಸಿದರು.
ನಂತರ ರಾಮದುರ್ಗ ತಾಲೂಕ ಪಂಚಾಯಿತಿಯಲ್ಲಿ ತಾಲೂಕಿನ ಎಲ್ಲಾ ಇಲಾಖೆ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಪ್ರಗತಿ ಪರಿಶೀಲಿನೆ ನಡೆಸಿ ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಮುಂಜಾಗ್ರತ ಕ್ರಮ ತೆಗೆದುಕೊಳ್ಳಲು ಸೂಚನೆ ನೀಡಿದರು.
ಈ ಸಂದರ್ಭದಲ್ಲಿಇಇ ಎಸ್ ಬಿ ಕೊಳಿ, ತಾಪಂ ಇಒ ಬಸವರಾಜ್ ಐನಾಪುರ್, ಎಇಇ ನಿಜಾಮ್ ಸುರಪುರ, ಸಿ.ಡಿಪಿ.ಒ ಶಂಕರ ಕುಂಬಾರ, ಸಹಾಯಕ ನಿರ್ದೇಶಕರಾದ ಶೇಖರ್ ಹಿರೇಸೋಮಣ್ಣವರ, ಅಪ್ಪಯಪ್ಪ ಕುಂಬಾರ ಹಾಗೂ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.
ವರದಿ:ಮಂಜುನಾಥ ಕಲಾದಗಿ