Ad imageAd image

ರಾಯಚೂರ ಜಿಲ್ಲಾಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ, ಸಾಂಸ್ಕೃತಿಕ ಸ್ಪರ್ಧೆಗಳಿಗೆ ಚಾಲನೆ

Bharath Vaibhav
ರಾಯಚೂರ ಜಿಲ್ಲಾಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ, ಸಾಂಸ್ಕೃತಿಕ ಸ್ಪರ್ಧೆಗಳಿಗೆ ಚಾಲನೆ
WhatsApp Group Join Now
Telegram Group Join Now

ರಾಯಚೂರು : ಕರ್ತವ್ಯ ನಿರ್ವಹಣೆಯಲ್ಲಿ ಎಷ್ಟೇ ಒತ್ತಡಗಳಿದ್ದರು ವೈಯಕ್ತಿಕ ಆರೋಗ್ಯಕ್ಕೂ ಸಹ ನೌಕರರು ಗಮನ ನೀಡಬೇಕು. ಆರೋಗ್ಯದ ಹಿತದೃಷ್ಠಿಯಿಂದ ನೌಕರರು ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ತುಕಾರಾಂ ಪಾಂಡ್ವೆ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕ ರಾಯಚೂರು ಇವರ ಸಂಯುಕ್ತಾಶ್ರಯದಲ್ಲಿ ಮಾ.04ರಂದು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಆರಂಭಗೊAಡ ರಾಯಚೂರ ಜಿಲ್ಲಾಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು 2024-25ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕ್ರೀಡೆಗಳಿಂದ ನಮ್ಮ ಆರೋಗ್ಯ ಪರಿಸ್ಥಿತಿ ಸುಧಾರಿಸಲಿದೆ. ವೃತ್ತಿಜೀವನದಲ್ಲಿ ಎದುರಾಗುವ ಒತ್ತಡ ಸನ್ನಿವೇಶಗಳನ್ನು ಸಮರ್ಪಕವಾಗಿ ನಿಭಾಯಿಸುವ ಸಾರ‍್ಥö್ಯವನ್ನು ನೌಕರರು ಬೆಳೆಸಿಕೊಳ್ಳಬೇಕು. ಕ್ರೀಡಾಕೂಟದಿಂದ ನೌಕರರಲ್ಲಿ ಬಾಂಧವ್ಯ, ಹೊಂದಾಣಿಕೆ ಹೆಚ್ಚಾಗುತ್ತದೆ ಎಂದರು.
ಈ ವೇಳೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಈರೇಶ ನಾಯಕ ಅವರು ಪ್ರಾಸ್ತಾವಿಕ ಮಾತನಾಡಿ, ಜಿಲ್ಲೆಯ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳು, ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರ ಮಾರ್ಗದರ್ಶನದಲ್ಲಿ ವಿವಿಧ ಸಮಿತಿಗಳು ಸತತ 15 ದಿನಗಳ ಕಾಲ ಪರಿಶ್ರಮವಹಿಸಿದ್ದರಿಂದ ಈ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ಆಯೋಜನೆ ಮಾಡಲು ಸಾಧ್ಯವಾಗಿದೆ ಎಂದು ತಿಳಿಸಿದರು.
ಓಟ, ಎತ್ತರ ಜಿಗಿತ, ಗುಂಡು ಎಸೆತ, ಕಬಡ್ಡಿ, ಖೋ-ಖೋ, ವಾಲಿಬಾಲ್, ಥ್ರೋಬಾಲ್. ಕ್ರಿಕೆಟ್, ಹಾಕಿ, ಫುಟ್ಬಾಲ್, ಯೋಗಾಸನ, ಬಾಲ್ ಬ್ಯಾಡ್ಮಿಂಟನ್, ಟೇಬಲ್ ಟೆನ್ನಿಸ್, ಕೇರಂ, ಚದುರಂಗ, ಬಾಸ್ಕೆಟ್ ಬಾಲ್, ಈಜು ಸೇರಿದಂತೆ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಲು ನೌಕರರಿಗೆ ಅವಕಾಶ ಕಲ್ಪಿಸಲಾಗಿದೆ.
ಅದೇ ರೀತಿ ಜಾನಪದ ನೃತ್ಯ, ಜಾನಪದ ಗೀತೆ, ಶಾಸ್ತ್ರೀಯ ಗಾಯನ, ಶಾಸ್ತ್ರೀಯ ವಾದ್ಯ, ಶಾಸ್ತ್ರೀಯ ನೃತ್ಯ, ಕಿರು ನಾಟಕ, ಕರಕುಶಲ ವಸ್ತು ಪ್ರದರ್ಶನ ಸೇರಿದಂತೆ ವಿವಿಧ ಸ್ಪರ್ಧೆಗಳಲ್ಲಿ ಭಾಗಿಯಾಗಲು ಸಾವಿರಕ್ಕಿಂತ ಹೆಚ್ಚು ನೌಕರರು ತಮ್ಮ ಹೆಸರನ್ನು ನೋಂದಾಯಿಸಿಕೊAಡಿದ್ದಾರೆ ಎಂದು ತಿಳಿಸಿದರು.
ಸ್ಪರ್ಧೆಗಳಲ್ಲಿ ಭಾಗವಹಿಸಿ ಕ್ರೀಡಾಕೂಟದಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ಹಾಗೂ ಗುಂಪು ಆಟಗಳಲ್ಲಿ ಪ್ರಥಮ ಸ್ಥಾನ ಪಡೆದ ನೌಕರರು ರಾಜ್ಯಮಟ್ಟದ ಸರಕಾರಿ ನೌಕರರ ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶ ಹೊಂದಿರುತ್ತಾರೆ. ಈ ನೌಕರರ ಕ್ರೀಡಾಕೂಟದ ಯಶಸ್ವಿಗಾಗಿ ವಿವಿಧ ಸಮಿತಿಗಳನ್ನು ಮಾನ್ಯ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ರಚಿಸಿದ್ದು, ಎಲ್ಲಾ ಸಮಿತಿಗಳಿಗೆ ಅವರದೇ ಆದ ಜವಾಬ್ದಾರಿ ನೀಡಲಾಗಿದೆ. ಈ ಕ್ರೀಡಾಕೂಟಕ್ಕೆ ನಿರ್ಣಾಯಕರನ್ನಾಗಿ ಒಟ್ಟು 60 ಜನ ದೈಹಿಕ ಶಿಕ್ಷಣ ಶಿಕ್ಷಕರನ್ನು ನಿಯೋಜನೆ ಮಾಡಿಕೊಳ್ಳಲಾಗಿದೆ. ನೌಕರರು ಸಮಯಕ್ಕೆ ಸರಿಯಾಗಿ ಸ್ಪರ್ಧೆಗಳಲ್ಲಿ ಭಾಗಿಯಾಗಬೇಕು ಎಂದು ತಿಳಿಸಿದರು.
7 ತಂಡಗಳು, 1020 ನೌಕರರು ಭಾಗಿ; ಎರಡು ದಿನಗಳ ಕಾಲ ನಡೆಯುವ ಕ್ರೀಡಾಕೂಟದಲ್ಲಿ ಕಬ್ಬಡ್ಡಿ, ಖೋಖೋ, ವಾಲಿಬಾಲ್, ಚೆಸ್, ಬ್ಯಾಡ್ಮಿಂಟನ್, ಲಾಂಗ್ ಜಂಪ್, ಶಾಟಪುಟ್, ಡಿಸ್ಕಸ್ ಥ್ರೋ, ಜಾವಲಿನ್ ಥ್ರೋ, ರನ್ನಿಂಗ್ ಸೇರಿದಂತೆ ವಿವಿಧ ಸ್ಪರ್ಧೆಗಳು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಜಿಲ್ಲೆಯ ದೇವದುರ್ಗ, ಸಿಂಧನೂರು, ಲಿಂಗಸೂಗೂರು, ರಾಯಚೂರು, ಮಸ್ಕಿ, ಮಾನವಿ ಹಾಗೂ ಸಿರವಾರ ಸೇರಿದಂತೆ 7 ತಂಡಗಳ ಸುಮಾರು 1020 ನೌಕರರು ಭಾಗವಹಿಸಲಿದ್ದಾರೆ.
ಇದೇ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ, ಇನ್ನಿತರ ಉಪಸ್ಥಿತರಿದ್ದರು

 

ವರದಿ: ಗಾರಲದಿನ್ನಿ ವೀರನಗೌಡ

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!