Ad imageAd image

ರಾಯಚೂರು ವಿಶ್ವವಿದ್ಯಾಲಯ ವಸತಿ ನಿಲಯ ನೂತನ ಕಟ್ಟಡ ಲೋಕಾರ್ಪಣೆ ಬಸನಗೌಡ ದದ್ದಲ್

Bharath Vaibhav
ರಾಯಚೂರು ವಿಶ್ವವಿದ್ಯಾಲಯ ವಸತಿ ನಿಲಯ ನೂತನ ಕಟ್ಟಡ ಲೋಕಾರ್ಪಣೆ ಬಸನಗೌಡ ದದ್ದಲ್
WhatsApp Group Join Now
Telegram Group Join Now

ರಾಯಚೂರು: ವಿಶ್ವವಿದ್ಯಾಲಯ ನೂತನ ಕಟ್ಟಡ ಕಾರ್ಯಕ್ರಮಕ್ಕೆ ವೇದಿಕೆಯಲ್ಲಿ ಸಸಿಗೆ ನೀರೇರೆಯುವ ಮೂಲಕ ರಾಯಚೂರು ಜಿಲ್ಲಾ ಉಸ್ತುವಾರಿ ಶರಣ ಪ್ರಕಾಶ್ ಪಾಟೀಲ್ ಮತ್ತು ಬಸನಗೌಡ ದದ್ದಲ್.ಎಂಎಲ್ಸಿ ವಸಂತ್ ಕುಮಾರ್. ವೇದಿಕೆಯನ್ನು ಅಲಂಕರಿಸಿದರು.

ರಾಯಚೂರು ವಿಶ್ವವಿದ್ಯಾಲಯ ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರ ಬಾಲಕಿಯರ ವಿದ್ದ್ಯಾರ್ತಿ ನಿಲಯದ ನೂತನ ಕಟ್ಟಡವನ್ನು ಉದ್ಘಾಟನೆಯನ್ನು ವೈದ್ಯಕೀಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾಕ್ಟರ್ ಶರಣ ಪ್ರಕಾಶ್ ಪಾಟೀಲ್ ರವರು ಲೋಕಾರ್ಪಣೆ ಮಾಡಿದರು.

ರಾಯಚೂರು ವಿಶ್ವವಿದ್ಯಾಲಯಕ್ಕೆ ತೆರಳಿದ ಸಚಿವರು ಮತ್ತು ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ರವರು ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟಿಸಿದರು. ನೂತನ ಕಟ್ಟಡ ವೀಕ್ಷಣೆ ಮಾಡಿದ ಸಚಿವರು ಮತ್ತು ಶಾಸಕರು ಮಾತನಾಡಿ ಕಟ್ಟಡವನ್ನು ಸರಿಯಾಗಿ ನಿರ್ವಹಣೆ ಮಾಡಿ ಹಾಳಾಗದಂತೆ ನೋಡಿಕೊಳ್ಳಬೇಕು ವಿದ್ಯಾರ್ಥಿಗಳಿಗೆ ಅವಶ್ಯವಿರುವ ಟೇಬಲ್ ಕುರ್ಚಿ ಖಾಟಗಳು ಸೇರಿದಂತೆ ಇನ್ನಿತರ ಸಾಮಗ್ರಿಗಳನ್ನು ಗುಣಮಟ್ಟವನ್ನು ಪರೀಕ್ಷಿಸಿ ಅಳವಡಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಬೇಕೆಂದು ವಿಶ್ವವಿದ್ಯಾಲಯ ಕುಲಪತಿಗಳಿಗೆ ಮತ್ತು ಕುಲ ಸಚಿವರಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ಶರಣಪ್ರಕಾಶ್ ಪಾಟೀಲ್ .ಗ್ರಾಮಾಂತರ ಶಾಸಕ ಬಸನಗೌಡ ದದ್ದಲ್. ನರಸಿಂಹ ನಾಯಕ್. ಶಿವಪ್ಪ ನಾಯಕ್. ಬಶೀರ್ ಸಬ್. ಮಲ್ಲಿಕಾರ್ಜುನ ಗೋನಾಳ. ಎಪಿಎಂಸಿ ಬಂದೇನವಾಜ್. ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ: ಗಾರಲದಿನ್ನಿ ವೀರನಗೌಡ

 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!