ಚಂದಿಗಢ: ರಾಜಸ್ತಾನ ರಾಯಲ್ಸ್ ತಂಡ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ಹದಿನೆಂಟನೇ ಲೀಗ್ ಪಂದ್ಯದಲ್ಲಿ ಬಲಿಷ್ಠ ಪಂಜಾಬ್ ಕಿಂಗ್ಸ್ ತಂಡವನ್ನು 50 ರನ್ ಗಳಿಂದ ಮಣಿಸಲು ಯಶಸ್ವಿಯಾಯಿತು.
ಇಲ್ಲಿನ ಮಹಾರಾಜ ಯಧುವೀಂದ್ರ ಸಿಂಗ್ ಕ್ರೀಡಾಂಗಣದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ತಾನ ರಾಯಲ್ಸ್ ತಂಡ ನಿಗದಿತ 20 ಓವರುಗಳಲ್ಲಿ 4 ವಿಕೆಟ್ ಗೆ 205 ರನ್ ಗಳಿಸಿತು. ಬೃಹತ್ ಮೊತ್ತ ಬೆನ್ನಟ್ಟಿದ ಪಂಜಾಬ್ ಕಿಂಗ್ಸ್ 9 ವಿಕೆಟ್ ಗೆ 155 ರನ್ ಗಳನ್ನು ಮಾತ್ರ ಗಳಿಸಲು ಸಾಧ್ಯವಾಗಿ ಸರಿಯಾಗಿ 50 ರನ್ ಗಳಿಂದ ಪಂದ್ಯದಲ್ಲಿ ಪರಾಭವಗೊಂಡಿತು.
ಇದರೊಂದಿಗೆ ರಾಜಸ್ತಾನ ರಾಯಲ್ಸ್ ತಂಡ ತನ್ನ ಎರಡನೇ ಗೆಲುವು ಪಡೆಯಿತು. ಇತ್ತ ಅಂಕ ಪಟ್ಟಿಯಲ್ಲಿ 2 ನೇ ಸ್ಥಾನದಲ್ಲಿದ್ದ ಪಂಜಾಬ್ ಕಿಂಗ್ಸ್ 4 ನೇ ಸ್ಥಾನಕ್ಕೆ ಕುಸಿತ ಕಂಡಿತು. ತಾನಾಡಿರುವ ಮೂರು ಪಂದ್ಯಗಳನ್ನು ಗೆದ್ದಿರುವ ದೆಹಲಿ ಕ್ಯಾಪಿಟಲ್ಸ್ 6 ಅಂಕಗಳಿಂದ ಪ್ರಥಮ ಸ್ಥಾನದಲ್ಲಿದೆ. ರನ್ ಸರಾಸರಿ ಆಧಾರದ ಮೇಲೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ದ್ವಿತೀಯ ಸ್ಥಾನದಲ್ಲಿದೆ.
ಪಂದ್ಯ ಶ್ರೇಷ್ಠ: ಜೋಪ್ರಾ ಆರ್ಚರ್ 25 for 3