Ad imageAd image

ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ರಾಜ್ಯೋತ್ಸವ ಆಚರಣೆ

Bharath Vaibhav
ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ರಾಜ್ಯೋತ್ಸವ ಆಚರಣೆ
WhatsApp Group Join Now
Telegram Group Join Now

———-ಸರ್ಕಾರಿ ಇಲಾಖೆಯಿಂದ ಪರಿಶಿಷ್ಟ ಜಾತಿ ಮತ್ತು ಪಂಗಡ ಸಂಘಕ್ಕೆ 

———ಸದಸ್ಯರನ್ನು ಮಾಡಿ ಸಂಘಟನೆ ಬಲಗೊಳಿಸಿ: ರಾಜ್ಯಾಧ್ಯಕ್ಷ ಮಹೇಶ್ ಹುಬಳಿ

ಬೆಂಗಳೂರು : ಸರ್ಕಾರಿ ಅರೆ ಸರ್ಕಾರಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ನೌಕರರ ಸಂಘದ ವತಿಯಿಂದ ರಾಜಾಜಿನಗರದ ಬಿಬಿಎಂಪಿ ಕಚೇರಿಯಲ್ಲಿ ಆಯೋಜಿಸಿದ್ದ ಸಂಘದ ತುರ್ತು ಸಭೆ ಮತ್ತು 70ನೇಯ ಕನ್ನಡ ರಾಜ್ಯೋತ್ಸವ ಬೆಂಗಳೂರು ಜಿಲ್ಲಾ ಅಧ್ಯಕ್ಷ ಶ್ರೀಧರ್ ಕೊಟ್ರೆ, ರಾಜ್ಯ ಪ್ರಧಾನ ಕಾರ್ಯದರ್ಶಿ ಸುಧಾಕರ್ ಎಸ್ ಜಡಗಿ ಮತ್ತು ಗೌರವಾಧ್ಯಕ್ಷ ನಾಗರಾಜ್ ಅವರ ನೇತೃತ್ವದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಾಜ್ಯಾಧ್ಯಕ್ಷ ಮಹೇಶ್ ಸಿ ಹುಬಳ್ಳಿ ಸಂವಿಧಾನ ಶಿಲ್ಪಿ ಡಾ ಬಾಬಾಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಎಲ್ಲರಿಗೂ ಕನ್ನಡ ಶಾಲು ಹೊದಿಸಿ ರಾಜ್ಯೋತ್ಸವ ಆಚರಿಸಲಾಯಿತು.


ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ನೌಕರರಿಗೆ ಆಗುತ್ತಿರುವ ಅನ್ಯಾಯಗಳು ಸರಿಪಡಿಸಿಕೊಳ್ಳಬೇಕಾದರೆ ನಾವು ಸಂಘಟಿತರಾಗಿ ಒಗ್ಗಟ್ಟಾಗಿ ಇದ್ದಾಗ ಮಾತ್ರ ಸಾಧ್ಯ ಎಂದು ಮಹೇಶ್ ಹುಬಳ್ಳಿ ಪದಾಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದರು.

ಜಿಲ್ಲಾಧ್ಯಕ್ಷ ಶ್ರೀಧರ್ ಕೊಟ್ರೇ ಸರ್ವರಿಗೂ ಸ್ವಾಗತ ಕೋರಿ ಮಾತಾಡಿದ ಅವರು 84 ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ನೌಕರರಿಗೆ ಸಂಘದ ಸದಸ್ಯರಾಗಿ ಮಾಡುತ್ತೇವೆ ಎಂದು ಶ್ರೀಧರ್ ಕೊಟ್ರೇ ಭರವಸೆ ನೀಡಿದರು.

ರಾಜ್ಯ ಪ್ರಧಾನ ಕಾರ್ಯದರ್ಶಿ ಸುಧಾಕರ್ ಎಸ್ ಜಡಗಿ ಮಾತನಾಡಿ ಬೆಂಗಳೂರು ನಗರದಲ್ಲಿ ಮತ್ತು ಹೊರವಲಯದ ತಾಲೂಕಗಳಲ್ಲಿ ಸದಸ್ಯತ್ವ ಅಭಿಯಾನ ಮಾಡಲಾಗುತ್ತದೆ ಅದಲ್ಲದೆ ಯಲಹಂಕದಲ್ಲಿ ಸಂಘ ರಚಿಸಲಾಗಿದೆ ಜೊತೆಗೆ ಸಂಘದ ಕಚೇರಿಯನ್ನು ಮಾಡಲಾಗಿದೆ ಎಂದರು.

ಜಿಲ್ಲಾ ಗೌರವಾಧ್ಯಕ್ಷ ಆರ್ ನಾಗರಾಜು ಅವರು ಸಂವಿಧಾನ ಪೀಠಿಕ್ಕೆ ಪಠಣ ಮಾಡಿಸಿದರು. ಜೊತೆಗೆ ರಾಜ್ಯ ಪ್ರಧಾನ ಕಾರ್ಯದರ್ಶಿ ಸುಧಾಕರ್ ಎಸ್ ಜಡಗಿ ಅವರ ಪೂಜ್ಯ ತಂದೆ ಅವರ ನಿಧನದ ಹಿನ್ನೆಲೆಯಲ್ಲಿ 2ನಿಮಿಷ ಮೌನಾಚರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯಾಧ್ಯಕ್ಷ ತಿಮ್ಮಣ್ಣ, ಈಶ್ವರ್, ಕೆ ಹೆಚ್ ಜ್ಞಾನೇಂದ್ರಪ್ಪ, ಅನುಸೂಯಾ, ಶೃತಿ, ಜಿ. ಶ್ರೀನಿವಾಸ್ ಸೇರಿದಂತೆ ರಾಜ್ಯ ಜಿಲ್ಲಾ ಮತ್ತು ತಾಲೂಕು ಪದಾಧಿಕಾರಿಗಳು ಭಾಗವಹಿಸಿದ್ದರು.

ವರದಿ: ಅಯ್ಯಣ್ಣ ಮಾಸ್ಟರ್ 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!