ಬೆಂಗಳೂರು : ಶೀಘ್ರದಲ್ಲೇ ಸಾರಿಗೆ ಇಲಾಖೆಯಲ್ಲಿ 9 ಸಾವಿರ ಹೊಸ ಸಿಬ್ಬಂದಿಗಳ ನೇಮಕಾತಿ ಮಾಡಲಾಗುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ಈ ಕುರಿತು ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಚಿವರು, ಸಾರಿಗೆ ಬಸ್ ಗಳ ಟಿಕೆಟ್ ದರ ಹೆಚ್ಚಳದ ಕುರಿತು ಪ್ರತಿಕ್ರಿಯೆ ನೀಡಿದರು.
2014 ರಿಂದ ಟಿಕೆಟ್ ದರ ಹೆಚ್ಚಳವಾಗಿಲ್ಲ. ಡೀಸೆಲ್ ಬೆಲೆ ಹೆಚ್ಚಳ ಹಾಗೂ ಸಿಬ್ಬಂದಿಗಳಿಗೆ ವೇತನ ನೀಡಲು ಸರ್ಕಾರಕ್ಕೆ ಹೊರೆಯಾಗುತ್ತಿದೆ. ಆದ್ದರಿಂದ ಸಿಬ್ಬಂದಿ ವೇತನ ಏರಿಕೆ ಹೆಚ್ಚಳಕ್ಕೆ ನಿರ್ಧರಿಸಲಾಗಿದೆ ಎಂದರು. ಜೊತೆಗೆ ಶೀಘ್ರವೇ ಸಾರಿಗೆ ಇಲಾಖೆಯಲ್ಲಿ 9 ಸಾವಿರ ಹೊಸ ಸಿಬ್ಬಂದಿಗಳ ನೇಮಕಾತಿ ಮಾಡಲಾಗುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.