ಬೆಳಗಾವಿ : MES ಪುಂಡರ ದೌರ್ಜನ್ಯ ದಿಂದ ಹಲ್ಲೆಗೊಳಗಾಗಿದ್ದ ಬಸ್ ಕಂಡಕ್ಟರ್ ಮಹದೇವಪ್ಪ ಅವರನ್ನ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು ಇವತ್ತು ಸಾರಿಗೆ ಸಚಿವ ರಾಮಲಿಂಗರೆಡ್ಡಿ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.
ಬಸ್ ನಿರ್ವಾಹಕ ಮಹಾದೇವ ಹುಕ್ಕೇರಿ ಅವರ ಆರೋಗ್ಯ ವಿಚಾರಿಸಿ ಆತನಿಗೆ ಮಾನಸಿಕ ಧೈರ್ಯ ತುಂಬಿದ್ದಾರೆ. ಅಲ್ಲದೆ ಪ್ರಕರಣದ ಸಮಗ್ರ ತನಿಖೆ ನಡೆಸುವ ಭರವಸೆ ನೀಡಿದ್ದಾರೆ.
ಕಂಡಕ್ಟರ್ ಮೇಲೆ ಉದ್ದೇಶಪೂರ್ವಕವಾಗಿ ಹಲ್ಲೆ ಮಾಡಲಾಗಿದೆ. ನಾವೆಲ್ಲ ಕಂಡಕ್ಟರ್ ಮಹದೇವಪ್ಪ ಪರ ಇದ್ದೇವೆ. ಹಲ್ಲೆ ಮಾಡಿದವರ ವಿರುದ್ದ ಗೂಂಡಾಕಾಯ್ದೆ ಹಾಕಬೇಕು ಎಂದರು.
ಹಲ್ಲೆಗೆ ಒಳಗಾಗಿರುವ ಮಹಾದೇವ ಅವರ ಆರೋಗ್ಯ ಸ್ಥಿರವಾಗಿದೆ. ಎರಡು ದಿನಗಳ ನಂತರ ಆಸ್ಪತ್ರೆಯಿಂದ ಬಿಡುಗಡೆ ಆಗಲಿದ್ದಾರೆ. ಇನ್ನು ತಮ್ಮ ಮೇಲೆ ಪೋಕ್ಸೊ ಪ್ರಕರಣ ದಾಖಲಾದ ಕಾರಣ ಮಹಾದೇವ ಆತಂಕಗೊಂಡಿದ್ದಾರೆ.
ಈ ಪ್ರಕರಣ ದಾಖಲಿಸಿಕೊಳ್ಳುವಾಗ ಪೊಲೀಸರು ಸಾಮಾನ್ಯ ಜ್ಞಾನವನ್ನೂ ಬಳಸಿಲ್ಲ. ಈ ಪ್ರಕರಣ ಹಿಂದಕ್ಕೆ ಪಡೆಯುವ ಹಾಗೂ ಆರೋಪಿಗಳ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ಜರುಗಿಸುವ ಸಂಬಂಧ ಗೃಹ ಸಚಿವ ಜಿ.ಪರಮೇಶ್ವರ ಅವರೊಂದಿಗೆ ಮಾತನಾಡುತ್ತೇನೆ ಎಂದು ತಿಳಿಸಿದರು



