ತುಮಕೂರು: ಜಿಲ್ಲೆಯ ಪಾವಗಡ ತಾಲ್ಲೂಕುನಲ್ಲಿ.ಆಮ್ ಆದ್ಮ ಪಕ್ಷದ ವತಿಯಿಂದ ಶನಿವಾರ ಪಾವಗಡ ಪಟ್ಟಣದ ನಿರೀಕ್ಷಣಾ ಮಂದಿರದಲ್ಲಿ ಸುದ್ದಿಗೋಷ್ಠಿ ಹಮ್ಮಿಕೊಳ್ಳಲಾಗಿತ್ತು.
ಪಾವಗಡ ತಾಲೂಕಿಗೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪಾವಗಡಕ್ಕೆ ಆಗಮಿಸುತ್ತಿದ್ದು, ಅವರ ಕಾರ್ಯಕ್ರಮಕ್ಕಾಗಿ ಕೋಟ್ಯಂತರ ರೂಪಾಯಿ ಜನರ ತೆರಿಗೆ ಹಣ ಪೋಲುಮಾಡಲಾಗುತ್ತಿದೆ ಎಂದು ಆಮ್ ಆದ್ಮ ಪಕ್ಷದ ತುಮಕೂರು ಜಿಲ್ಲಾಧ್ಯಕ್ಷ ಹೆಚ್.ಜಯರಾಮಯ್ಯ ಆರೋಪಿಸಿದ್ದಾರೆ. ಸಿದ್ದರಾಮಯ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿ ರಾಜ್ಯದ ಅಭಿವೃದ್ಧಿಯನ್ನು ಮರೆತಿದೆ ಎಂದು ಅವರು ಟೀಕಿಸಿದ್ದಾರೆ.
ಇದೇ ಸಂದರ್ಭದಲ್ಲಿ ಮಾತನಾಡಿದ. ಪಕ್ಷದ ಜಿಲ್ಲಾ ಕಾರ್ಯದರ್ಶಿ ಎನ್.ರಾಮಾಂಜಿನಪ್ಪ ಮಾತನಾಡಿ, ಪಾವಗಡಕ್ಕೆ ಆಗಮಿಸುತ್ತಿರುವ ಮುಖ್ಯಮಂತ್ರಿಗಳನ್ನು ಪಕ್ಷದ ವತಿಯಿಂದ ಸ್ವಾಗತಿಸುತ್ತೇವೆ, ಇದೇ ವೇಳೆ ತಾಲ್ಲೂಕಿನಲ್ಲಿ ಕಾಡುತ್ತಿರುವ ಜ್ವಲಂತ ಸಮಸ್ಯೆಗಳನ್ನು ಅವರ ಗಮನಕ್ಕೆ ತಂದು ಅವುಗಳ ಪರಿಹಾರಕ್ಕೆ ನಿವೇದನೆ ಮಾಡುತ್ತೇವೆ ಎಂದು ಹೇಳಿದರು.
ಆರೋಗ್ಯ, ಶಿಕ್ಷಣ, ನೀರಾವರಿ, ಕೃಷಿ, ಗ್ರಾಮೀಣ ರಸ್ತೆಗಳ ದುಸ್ಥಿತಿ, ಸಾರಿಗೆ, ಸಿಬ್ಬಂದಿ ಕೊರತೆ, ಬೈಪಾಸ್ರಸ್ತೆ, ಕೈಗಾರಿಕೆ ಮತ್ತು ಉದ್ಯೋಗ, ಬಾಬು ಜಗಜೀವನ್ರಾಮ್ ಭವನ ನಿರ್ಮಾಣ, ದೊಮ್ಮತಮರಿಯಲ್ಲಿ ಹೊಸ ಪೊಲೀಸ್ಠಾಣೆ ಸ್ಥಾಪನೆ, ರೈತರಿಗೆ ಉಚಿತ ಸೋಲಾರ್ ಪಂಪ್ಸೆಟ್ ವಿತರಣೆ, ಮತ್ತಿತರ ಅಂಶಗಳನ್ನೊಳಗೊಂಡ ಮನವಿ ಪತ್ರವನ್ನು ಸಲ್ಲಿಸಲಾಗುವುದು ಎಂದು ಹೇಳಿದರು.
ಈ ವೇಳೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಯರಾಮಯ್ಯ, ಈ ಹಿಂದೆ ಬಿಜೆಪಿ ಸರ್ಕಾರವಿದ್ದಾಗ ಪೇ ಸಿಎಂ, 40% ಕಮಿಷನ್ ಸರ್ಕಾರ ಎಂದು ಟೀಕಿಸಿದ್ದ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿತ್ತು. ಇದೀಗ ಗ್ಯಾರಂಟಿಗಳಿಗೆ ಇರುವ ಹಣವನ್ನೆಲ್ಲ ಖರ್ಚು ಮಾಡಿ ಅಭಿವೃದ್ಧಿ ಕಡೆಗಣಿಸಿದ್ದಾರೆ. 4.20 ಲಕ್ಷ ಕೋಟಿ ಬಡ್ಡೆಟ್ನಲ್ಲಿ ಕನಿಷ್ಟ 1 ಲಕ್ಷ ಕೋಟಿಯನ್ನಾದರೂ ಅಭಿವೃದ್ಧಿ ಕೆಲಸಗಳಿಗೆ ಮೀಸಲಿರಿಸಬೇಕಿತ್ತು, ಇನ್ನು ಸರ್ಕಾರದಲ್ಲಿ ಭ್ರಷ್ಟಾಚಾರ ನಡಿತಾ ಇದೆ ಎಂದು ತಿಳಿಸಿದ್ದಾರೆ.
ಆಮ್ಆದ್ಮ ಪಕ್ಷದ ತಾಲ್ಲೂಕು ಮಹಿಳಾ ಘಟಕದ ಅಧ್ಯಕ್ಷೆ ಅಕ್ಕಮ್ಮ, ಯುವ ಘಟಕದ ಅಧ್ಯಕ್ಷ ನಾಗರಾಜು, ಶಿರಾ ತಾಲ್ಲೂಕು ಅಧ್ಯಕ್ಷ ತಿಮ್ಮಪ್ಪ, ಮುಖಂಡರಾದ ಬಿ.ವಿ.ವೆಂಕಟಸ್ವಾಮಿ, ಬಿ.ನಾಗರಾಜಯ್ಯ ಮತ್ತಿತರರು ಉಪಸ್ಥಿತರಿದ್ದರು.
ವರದಿ: ಶಿವಾನಂದ ಪಾವಗಡ




