ಬೆಳಗಾವಿ: ಐಪಿಎಸ್ ಅಧಿಕಾರಿ ರಾಮಚಂದ್ರ ರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರು ಯಾರೇ ಆಗಿರಲಿ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ನಂದಗಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಐಪಿಎಸ್ ಅಧಿಕಾರಿ ರಾಮಚಂದ್ರ ರಾವ್ ರಾಸಲೀಲೆ ಪ್ರಕರಣದ ಬಗ್ಗೆ ನನಗೆ ಬೆಳಿಗ್ಗೆ ಗೊತ್ತಾಯಿತು.ಈ ಬಗ್ಗೆ ವಿಚಾರಣೆ ಮಾಡಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು.
ಕಾನೂನಿಗಿಂತ ದೊಡ್ದವರು ಯಾರೂ ಇಲ್ಲ. ತಪ್ಪಿತಸ್ಥ ಯಾರೇ ಆಗಿರಲಿ, ಎಷ್ಟು ದೊಡ್ದ ವ್ಯಕ್ತಿಯೇ ಆಗಿರಲಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಇನ್ನೊಂದೆಡೆ ರಾಸಲೀಲೆ ಪ್ರಕರಣದ ವಿಡಿಯೋ ವೈರಲ್ ಆಗಿತ್ತಿದ್ದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭೇಟಿಗೆ ಬಂದ ರಾಮಚಂದ್ರ ರಾವ್ ಅವರನ್ನು ಭೇಟಿಯಾಗಲು ಗೃಹ ಸಚಿವರು ನಿರಾಕರಿಸಿದ್ದಾರೆ.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ರಾಮಚಂದ್ರ ರಾವ್, ಗೃಹ ಸಚಿವರು ಅನಾರೋಗ್ಯ ಕಾರಣಕ್ಕೆ ಭೇಟಿಯಾಗಲು ನಿರಾಕರಿಸಿದ್ದಾರೆ ಎಂದು ತಿಳಿಸಿದ್ದಾರೆ.
ರಾಸಲೀಲೆ ವಿಡಿಯೋ ವಿಚಾರವಾಗಿ, ಇದು ಹಳೆಯ ವಿಡಿಯೋ. ಹಳೇ ವಿಡಿಯೋವನ್ನು ಯಾರೋ ದುರುದ್ದೇಶ ಕಾರಣಕ್ಕೆ ವೈರಲ್ ಮಾಡಿದ್ದಾರೆ. ಇದೀ ಈಗಿನ ಘಟನೆಗಳಲ್ಲ ಎಂದು ಸಮಜಾಯಿಷಿ ನೀಡಿದ್ದಾರೆ.
ಇದು 8 ವರ್ಷದ ಹಳೇ ವಿಡಿಯೋ. ಈಗ ವೈರಲ್ ಮಾಡಿದ್ದಾರೆ. ಈ ಮೂಲಕ ನನ್ನ ವಿರುದ್ಧ ಷಡ್ಯಂತ್ರ ನಡೆಸಿದ್ದಾರೆ.
ನಾನು ಬೆಳಗಾವಿಯಲ್ಲಿದ್ದಾಗಿನ ಕಚೇರಿಯ ವಿಡಿಯೋವನ್ನು ಈಗ ವೈರಲ್ ಮಾಡಲಾಗಿದೆ. ಇದು ಸುಳ್ಳು ವಿಡಿಯೋ. ನನ್ನ ವಿರುದ್ಧ ಆರೋಪ ಮಾಡಲು ಈ ರೀತಿ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ರಾಮಚಂದ್ರ ರಾವ್ ಪ್ರಸ್ತುತ ಡಿಸಿಆರ್ ಇ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರು ಡಿಜಿಪಿ ಆಗಿದ್ದಾಗ ಕರ್ತವ್ಯದ ವೇಳೆ ಕಚೇರಿಯಲ್ಲಿಯೇ ರಾಸಲೀಲೆಯಲ್ಲಿ ತೊಡಗಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.




