ಬೆಳಗಾವಿ : ಬೆಳಗಾವಿಯಲ್ಲಿ ಜಿಲ್ಲೆಯಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದೆ. ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರಗೈದು ಆರೋಪಿ ಆತ್ಮಹತ್ಯೆಗೆ ಶರಣಾದ ಘಟನೆ ಜಿಲ್ಲೆಯ ರಾಮದುರ್ಗ ತಾಲೂಕಿನ ತೋರಣಗಟ್ಟಿ ಗ್ರಾಮದಲ್ಲಿ ನಡೆದಿದೆ.
ಕೊಣ್ಣೂರು ಗ್ರಾಮದ ಈರಪ್ಪ ಕರಡಿ ಎಂಬಾತನೇ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರಗೈದು ಬಳಿಕ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಚಾಕೊಲೇಟ್ ಆಸೆ ತೋರಿಸಿ 5 ವರ್ಷದ ಬಾಲಕಿಯನ್ನು ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ.
ಅತ್ಯಾಚಾರ ಘಟನೆಯ ಬಾಲಕಿಯ ಮನೆಯಲ್ಲಿ ಗೊತ್ತಾದ ಬಳಿಕ ಆರೋಪಿ ಈರಪ್ಪ ಕಡಾಡಿ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಘಟನೆ ಕುರಿತು ಕಡಕೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




