ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡಿದ್ದ ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಅಶ್ಲೀಲ ಸಿ.ಡಿ. ಆರೋಪ ಪ್ರಕರಣದ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಡಿ.19ಕ್ಕೆ ಮುಂದೂಡಿ ಆದೇಶಿಸಿದೆ.
ರಮೇಶ್ ಜಾರಕಿಹೊಳಿ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ ರಚನೆ ಮಾಡಿರುವ ಕುರಿತಾದ ಪ್ರಕರಣದ ಕುರಿತೂ ವಿಚಾರಣೆಯನ್ನು ಇಂದು ಕೋರ್ಟ್ ಮುಂದೂಡಿದೆ.
ನ್ಯಾ.ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠದಲ್ಲಿ ವಿಚಾರಣೆ ನಡೆದಿದ್ದು, ರಾಜ್ಯ ಸರ್ಕಾರವು ಇದುವರೆಗೂ ಲಿಖಿತ ವಾದಾಂಶವನ್ನು ಏನೆಂಬುವುದನ್ನು ಸಲ್ಲಿಸದ ಹಾಗೂ ನ್ಯಾಯಾಲಯದ ಹಿಂದಿನ ಆದೇಶಗಳನ್ನು ಸರ್ಕಾರ ಪಾಲಿಸಿಲ್ಲ. ಸೂಚನೆ ಪಡೆಯಲು ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕ ಬಿ.ಎನ್. ಜಗದೀಶ್ ಅವರು ಸಮಯ ಕೋರಿದ ಹಿನ್ನೆಲೆಯಲ್ಲಿ ಅರ್ಜಿಯನ್ನು ಮುಂದೂಡಲಾಗಿದೆ.
ಇನ್ನು ಸಿಡಿ ಪ್ರಕರಣವು ಇದೊಂದು ರಾಜಕೀಯ ಷಡ್ಯಂತ್ರ ಎಂದು ರಮೇಶ್ ಜಾರಕಿಹೊಳಿ ಅವರು ಆರೋಪಿಸುತ್ತಲೇ ಬಂದಿದ್ದಾರೆ.