Join The Telegram | Join The WhatsApp |
ಬೆಂಗಳೂರು : ಭ್ರಷ್ಟಾಚಾರ ಮಾಡಿ ಒಂದೂವರೆ ಸಾವಿರ ಕೋಟಿ ರೂ. ಸಂಗ್ರಹ ಮಾಡಿದ್ದಾರೆ. ಹೀಗಾಗಿ ರಮೇಶ್ ಜಾರಕಿಹೊಳಿ ಮತದಾರರಿಗೆ 6 ಸಾವಿರ ರೂ. ಕೊಡುವುದಾಗಿ ಹೇಳಿದ್ದಾರೆ ಎಂದು ರಮೇಶ್ ಜಾರಕಿಹೊಳಿ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿ ಅವರು ಹತಾಶೆಯಿಂದ ಮಾತನಾಡುತ್ತಿದ್ದಾರೆ. ರಮೇಶ್ ಜಾರಕಿಹೊಳಿ ಕನಕಪುರಕ್ಕೆ ಬಂದು ಚುನಾವಣೆಗೆ ನಿಲ್ಲಲ್ಲ. ತಲೆಕೆಟ್ಟವರ ಬಗ್ಗೆ ನಾನು ಯಾಕೆ ಮಾತನಾಡಲಿ ಎಂದು ರಮೇಶ್ ಜಾರಕಿಹೊಳಿಗೆ ತಿರುಗೇಟು ನೀಡಿದ್ದಾರೆ.
ಮತದಾರರಿಗೆ 6 ಸಾವಿರ ರೂ. ಆಮಿಷ ನೀಡಿದ್ದಕ್ಕೆ ನಾವು ದೂರು ನೀಡಿದ್ದು, ವಿಪಕ್ಷ ನಾಯಕರಾಗಿ ಅದನ್ನು ಮಾಡಬಾರದಾ? ಭ್ರಷ್ಟಾಚಾರ ಮಾಡಿ ಒಂದೂವರೆ ಸಾವಿರ ಕೋಟಿ ರೂ. ಸಂಗ್ರಹ ಮಾಡಿದ್ದಾರೆ. 6 ಸಾವಿರ ರೂ. ಕೊಡುತ್ತೇವೆ ಎಂದು ಹೇಳಿದ ವಿಡಿಯೋ ಇದೆ ಎಂದರು.
Join The Telegram | Join The WhatsApp |