ಬೆಂಗಳೂರು : ಎಂಎಲ್ಸಿ ಜಗದೀಶ್ ಶೆಟ್ಟರ್ ಅವರನ್ನು ಗೋಕಾಕ್ ಕ್ಷೇತ್ರದ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಅವರು ಇಂದು ಶೆಟ್ಟರ್ ಅವರ ಮನೆಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಬೆಂಗಳೂರಿನ ಆರ್ ಟಿ ನಗರ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.
ಇಂದು ಮಧ್ಯಾಹ್ನ ಶೆಟ್ಟರ್ ಅವರ ನಿವಾಸದಲ್ಲಿ ರಮೇಶ್ ಜಾರಕಿಹೊಳಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.
ಉತ್ತರ ಕರ್ನಾಟಕ ಭಾಗದ ಆಪರೇಷನ್ ಹಸ್ತದ ಹೊಣೆಯನ್ನು ಜಗದೀಶ್ ಶೆಟ್ಟರ್ ಹೊತ್ತಿದ್ದಾರೆ. ಈ ಮೂಲಕ ರಮೇಶ್ ಜಾರಕಿಹೊಳಿ ಅವರ ಭೇಟಿ ರಾಜ್ಯ ರಾಜಕಾರಣದಲ್ಲಿ ಯಾವ ರೀತಿ ಸಂಚಲನ ಮೂಡಿಸಲಿದೆ ಎಂದು ಕಾದು ನೋಡಬೇಕಾಗಿದೆ.
ಇತ್ತೀಚಿಗೆ ತೆರೆ ಮರೆಯ ಹಿಂದೆ ರಾಜ್ಯದಲ್ಲಿ ಆಪರೇಷನ್ ಹಸ್ತ ನಡೆಯುತ್ತಿದ್ದು ಈಗಾಗಲೇ ಬಿಜೆಪಿ ಹಾಗೂ ಜೆಡಿಎಸ್ ನ ಹಲವು ಕಾರ್ಯಕರ್ತರು ಮತ್ತು ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಅಲ್ಲದೆ ಇತ್ತೀಚ್ಚಿಗೆ ಬಿಜೆಪಿಯ ಮಾಜಿ ಶಾಸಕ ರಾಮಣ್ಣ ಲಮಾಣಿ ಹಾಗೂ ಎಂ.ಪಿ ರೇಣುಕಾಚಾರ್ಯ ಕೆಪಿಸಿಸಿ ಕಚೇರಿಯಲ್ಲಿ ಕೈ ಸೇರೋಡೆಗೊಂಡಿದ್ದರು. ಇದೀಗ ರಮೇಶ್ ಜಾರಕಿಹೊಳಿ ಜಗದೀಶ್ ಶೆಟ್ಟರ್ ಅವರನ್ನು ಭೇಟಿಯಾಗಿದ್ದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.