ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು, ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಸೋಮವಾರ ಅವರ ಸ್ವಗೃಹದಲ್ಲಿ ಭೇಟಿ ಮಾಡಿ, ಅಭಿನಂದನೆ ಸಲ್ಲಿಸಿದರು.
ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರಿಗೆ ಸನ್ಮಾನಿಸಿ, ಗೌರವಿಸಿ, ಅಭಿನಂದನೆ ಸಲ್ಲಿಸಿದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು, ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವನ್ನು ಶ್ಲಾಘಿಸಿದರು.
ಈ ಸಂದರ್ಭದಲ್ಲಿ ಎನ್.ಆರ್. ಸಂತೋಷ್, ಮಾಜಿ ಸಚಿವ ಶ್ರೀಮಂತ ಪಾಟೀಲ, ಮುಖಂಡರಾದ ಭರತ್ ಮಗದೂರ, ಅಪ್ಪಾಸಾಹೇಬ ಅವತಾಡೆ ಅವರು ಉಪಸ್ಥಿತರಿದ್ದರು.