Ad imageAd image

ಪ್ರಧಾನಿ ಮೋದಿ ಶನಿ ಇದ್ದಹಾಗೇ :ರಮೇಶ್ ಕುಮಾರ್ ವಿವಾದಾತ್ಮಕ ಹೇಳಿಕೆ

Bharath Vaibhav
ಪ್ರಧಾನಿ ಮೋದಿ ಶನಿ ಇದ್ದಹಾಗೇ :ರಮೇಶ್ ಕುಮಾರ್ ವಿವಾದಾತ್ಮಕ ಹೇಳಿಕೆ
RAMESH KUMAR
WhatsApp Group Join Now
Telegram Group Join Now

ಕೋಲಾರ : ಪ್ರಧಾನಿ ನರೇಂದ್ರ ಮೋದಿ ಅವರು ಶನಿ ಇದ್ದಹಾಗೇ ಎಂದು ಹೇಳುವ ಮೂಲಕ ಮಾಜಿ ಸ್ಪೀಕರ್, ಕಾಂಗ್ರೆಸ್ ನಾಯಕ ರಮೇಶ್ ಕುಮಾರ್ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಈ ದೇಶಕ್ಕೆ ಹಿಡಿದಿರುವ ಶನಿ ಬಿಟ್ಟಿ ಹೋಗಲಿ ಎಂದು ಕಾಯುತ್ತಿದ್ದೇವೆ.ಜೂನ್ ೪ ರಂದು ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಕಾಯುತ್ತಿದ್ದೇವೆ. ಇಂದಿರಾ ಗಾಂಧಿ ಅವರು ಎಲ್ಲಾ ಜಾತಿ, ಜನಾಂಗದವರಿಗೆ ಆತ್ಮಸ್ಥೈರ್ಯ ತುಂಬುತ್ತಿದ್ದರು. ಅಂತಹ ಸ್ಥಾನಕ್ಕೆ ಶನಿ ಬಂದು ಕೂತಿದ್ದಾನೆ ಎಂದು ಪ್ರಧಾನಿ ಮೋದಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಸಂತೆಯಲ್ಲಿ ಹಾವಾಡಿಗ ಸುಳ್ಳು ಹೇಳುವುದನ್ನು ನಾವೆಲ್ಲಾ ನೋಡಿದ್ದೇವೆ. ಆದರೆ ಪ್ರಧಾನ ಮಂತ್ರಿ ಸುಳ್ಳು ಹೇಳುವುದು ಪ್ರಪಂಚದಲ್ಲಿ ಎಲ್ಲೂ ನೋಡಿಲ್ಲ. ರಾಜ್ಯದಲ್ಲಿ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲಲಿದೆ ಎಂದು ಹೇಳಿದ್ದಾರೆ.

WhatsApp Group Join Now
Telegram Group Join Now
Share This Article
error: Content is protected !!