Ad imageAd image

ಫೆ.10ರಂದು ಶುಭ ಸುದ್ದಿ ಸಿಗಲಿದೆ : ರಮೇಶ್ ಜಾರಕಿಹೊಳಿ

Bharath Vaibhav
ಫೆ.10ರಂದು ಶುಭ ಸುದ್ದಿ ಸಿಗಲಿದೆ : ರಮೇಶ್ ಜಾರಕಿಹೊಳಿ
ramesh jarkiholi
WhatsApp Group Join Now
Telegram Group Join Now

ನವದೆಹಲಿ: ರಾಜ್ಯ ಬಿಜೆಪಿಯಲ್ಲಿನ ಆಂತರಿಕ ಕಲಹ ದೆಹಲಿ ಅಂಗಳ ತಲುಪಿದ್ದು, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಣ ಹಾಗೂ ಬಿ.ವೈ.ವಿಜಯೇಂದ್ರ ಬಣ ದೆಹಲಿಯಲ್ಲಿ ಬೀಡು ಬಿಟ್ಟಿದೆ.

ಈ ಬೆಳವಣಿಗೆ ಬೆನ್ನಲ್ಲೇ ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ರಮೇಶ್ ಜಾರಕಿಹೊಳಿ, ಶೀಘ್ರದಲ್ಲೇ ಒಳ್ಳೆಯ ಸುದ್ದಿ ಸಿಗಲಿದೆ. ಫೆ.10ರಂದು ಶುಭ ಸುದ್ದಿ ಸಿಗಲಿದೆ ಎಂದು ತಿಳಿಸಿದ್ದಾರೆ.

ಇನ್ನು ಬಿ.ಎಲ್ ಸಂತೋಷ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಇಂದು ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾಗಿ ಕುತೂಹಲ ಮೂಡಿಸಿದ್ದಾರೆ.

ಯತ್ನಾಳ್ ಬಣದ ರಮೇಶ್ ಜಾರಕಿಹೊಳಿ, ಜಿ.ಎಂ.ಸಿದ್ದೇಶ್ವರ್, ಕುಮಾರ್ ಬಂಗಾರಪ್ಪ, ಯತ್ನಾಳ್ ಸೇರಿದಂತೆ ಹಲವು ನಾಯಕರು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಭೇಟಿಯಾಗಿ ರಾಜ್ಯದಲ್ಲಿನ ಬಿಜೆಪಿ ಬೆಳವಣಿಗೆ, ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರವಾಗಿ ಚರ್ಚೆ ನಡೆಸಿದ್ದರು.

WhatsApp Group Join Now
Telegram Group Join Now
Share This Article
error: Content is protected !!