ಬೆಂಗಳೂರು : ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ಎನ್ ಐಎ ಅಧಿಕಾರಿಗಳು ಇಬ್ಬರು ಬಂಧಿಸಿದ್ದು, ಇಂದು ಅವರನ್ನು ಕೋರ್ಟ್ ಗೆ ಹಾಜರುಪಡಿಸಿದ್ದು, 10 ದಿನ ಎನ್ ಐಎ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ನೀಡಿದೆ.
ಬಂಧಿತ ಉಗ್ರರನ್ನು ಇಂದು ಎನ್ ಐಎ ಅಧಿಕಾರಿಗಳು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ.ಉಗ್ರರಾದ ಮುಸಾವಿರ್, ಅಬ್ದುಲ್ ಮತೀನ್ ರನ್ನು ಕೋರಮಂಗಲದಲ್ಲಿರುವ ರಾಷ್ಟ್ರೀಯ ಕ್ರೀಡಾ ಗಾಮದಲ್ಲಿರುವ ಜಡ್ಜ್ ಮುಂದೆ ಹಾಜರುಪಡಿಸಲಾಗಿದೆ. ಈ ವೇಳೆ ವಿಚಾರಣೆ ನಡೆಸಿದ ಕೋರ್ಟ್ ಇಬ್ಬರು ಉಗ್ರರನ್ನು 10 ದಿನಗಳ ಕಾಲ ಎನ್ ಐಎ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ನೀಡಿದೆ.
ಮುಸ್ಸಾವಿರ್ ಹುಸೇನ್ ಶಾಜಿಬ್ ಕೆಫೆಯಲ್ಲಿ ಬಾಂಬ್ ಇಟ್ಟಿದ್ದಾನೆ ಮತ್ತು ಅಬ್ದುಲ್ ಮತೀನ್ ತಾಹಾ ಸ್ಫೋಟದ ಮಾಸ್ಟರ್ ಮೈಂಡ್ ಎಂದು ಭಯೋತ್ಪಾದನಾ ವಿರೋಧಿ ಸಂಸ್ಥೆ ತಿಳಿಸಿದೆ.