Ad imageAd image
- Advertisement -  - Advertisement -  - Advertisement - 

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ : ಮತ್ತೆ ಐವರನ್ನು ಬಂಧಿಸಿದ ಎನ್‌ಐಎ

Bharath Vaibhav
ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ : ಮತ್ತೆ ಐವರನ್ನು ಬಂಧಿಸಿದ ಎನ್‌ಐಎ
WhatsApp Group Join Now
Telegram Group Join Now

ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐ ಎ ಅಧಿಕಾರಿಗಳು ಐವರನ್ನು ಬಂಧಿಸಿದ್ದಾರೆ.

ಬಂಧಿತರನ್ನು ವೈದ್ಯ ಅಹಮದ್, ಹುಬ್ಬಳ್ಳಿಯಲ್ಲಿ ಶೋಯಿಬ್ ಮಿರ್ಜಾ, ಆತನ ಸಹೋದರ ಅಜೀಬ್ ಅಹಮದ್, ಆಂಧ್ರಪ್ರದೇಶದ ಅನಂತಪುರ ರಾಮದುರ್ಗದಲ್ಲಿ ಬೆಂಗಳೂರು ಮೂಲದ ಟೆಕ್ಕಿ ಸೋಹೆಲ್ ಬಂಧಿತರು ಎಂದು ಗುರುತಿಸಲಾಗಿದೆ.

ಪ್ರಕರಣ ಸಂಬಂಧ ಮಂಗಳವಾರ ಎನ್‌ಐಎ ಅಧಿಕಾರಿಗಳು 4 ರಾಜ್ಯಗಳ 11 ಕಡೆ ದಾಳಿ ಮಾಡಿದ್ದಾರೆ. ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಅಧಿಕಾರಿಗಳು ಬೆಂಗಳೂರಿನ ನಾಲ್ಕು ಕಡೆಗಳಲ್ಲಿ ದಾಳಿ ನಡೆಸಿದ್ದಾರೆ.

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ಉಗ್ರರ ಜೊತೆ ಸಂಪರ್ಕ ಹೊಂದಿದ್ದವರ ಸ್ಥಳಗಳ ಮೇಲೆ ದಾಳಿ ನಡೆಸಲಾಗಿದ್ದು, ಈ ವೇಳೆ ಕೆಲ ಮಹತ್ವದ ದಾಖಲೆಗಳು ಲಭ್ಯವಾಗಿವೆ ಎಂದು ತಿಳಿದು ಬಂದಿದೆ.

ಬೆಂಗಳೂರಿನ ಕುಮಾರಸ್ವಾಮಿ ಲೇಔಟ್, ಬನಶಂಕರಿ ಸೇರಿದಂತೆ ನಾಲ್ಕು ಕಡೆ ದಾಳಿ ನಡೆಸಿದ್ದಾರೆ. ಪ್ರಕರಣ ಸಂಬಂಧ ಬೆಂಗಳೂರು ಮಾತ್ರವಲ್ಲ ಕೊಯಮತ್ತೂರ್ ನಲ್ಲಿಯೂ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೊಯಮತ್ತೂರ್ ವೈದ್ಯ ಜಾಫರ್ ಇಕ್ಬಾಲ್ ಮತ್ತು ನಯನ್ ಸಾದಿಕ್ ಮನೆಗಳ ಮೇಲೆ ದಾಳಿ ನಡೆಸಲಾಗಿದೆ.

WhatsApp Group Join Now
Telegram Group Join Now
Share This Article
error: Content is protected !!