ಬೆಂಗಳೂರು: ರಾಜ್ಯದಲ್ಲಿ “ರಣದೀಪ್” ಆಡಳಿತ ಜಾರಿ ಆಗಿದೆಯಾ? ಗುರುವಾರದ ಸಂಪುಟ ಸಭೆಯೂ ಸುರ್ಜೆವಾಲಾ ಅವರ ಅಧ್ಯಕ್ಷತೆಯಲ್ಲಿ ನಡೆಯುತ್ತಾ? ಎಂಬುದಾಗಿ ಪ್ರತಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನಿಸಿದ್ದಾರೆ.
ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಲಾಟರಿ ಸಿಎಂ ಸಿದ್ಧರಾಮಯ್ಯ ಅವರ ಮೇಲೆ ಸಂಪೂರ್ಣವಾಗಿ ವಿಶ್ವಾಸ ಕಳೆದುಕೊಂಡಿರುವ ಕಾಂಗ್ರೆಸ್ ಹೈಕಮಾಂಡ್ ಕರ್ನಾಟಕದಲ್ಲಿ “ರಣದೀಪ್ ” ಆಡಳಿತ ಹೇರಿದೆ ಎಂಬುದಾಗಿ ಗುಡುಗಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ, ಪಂಚತಾರಾ ಹೋಟೆಲ್ ಗಳಲ್ಲಿ ಅತೃಪ್ತ ಶಾಸಕಾರ ದೂರು-ದುಮ್ಮಾನ ಕೇಳುತ್ತಿರುವ, ಮಂತ್ರಿಗಳ ಸಾಧನೆ ಪರಾಮರ್ಶೆ ಮಾಡುತ್ತಿರುವ ರಣದೀಪ್ ಸುರ್ಜೆವಾಲಾ ಅವರು, ಗುರುವಾರ ವಿಧಾನಸೌಧದಲ್ಲಿ ನಡೆಯುವ ಸಂಪುಟ ಸಭೆಗೂ ಬಂದು ತಾವೇ ಅಧ್ಯಕ್ಷತೆ ವಹಿಸಿದರೂ ಅಚ್ಚರಿ ಪಡಬೇಕಿಲ್ಲ ಎಂದಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರಿಗೆ ಆಡಳಿತದ ಮೇಲೆ ಹಿಡಿತವಿಲ್ಲ, ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ಶಾಸಕರ ಬೆಂಬಲ ಇಲ್ಲ, ತಮಗೆ ಬೇಕಾದವರನ್ನು ಸಿಎಂ ಆಗಿ ನೇಮಕ ಮಾಡಲು ರಾಹುಲ್ ಗಾಂಧಿ ಅವರಿಗೆ ಶಕ್ತಿ ಇಲ್ಲ ಎಂದು ತಿಳಿಸಿದ್ದಾರೆ.