Ad imageAd image

ತಂದೆಯಿಂದಲೇ 13 ವರ್ಷದ ಮಗಳ ಮೇಲೆ ಅತ್ಯಾಚಾರ

Bharath Vaibhav
RAPE
WhatsApp Group Join Now
Telegram Group Join Now

ತುಮಕೂರು : ಇತ್ತೀಚಿಗೆ ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ್ ಕೊಲೆ ಪ್ರಕರಣ ಇನ್ನೂ ಮಾಸುವ ಮುನ್ನವೇ ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ತಂದೆಯೇ ಮಗಳ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರು ನಗರದ ಗಾಂಧಿನಗರದ ಹಿಪ್ಪೇತೋಪು ಎಂಬಲ್ಲಿ ನಡೆದಿದೆ.

ಹೌದು ತಂದೆಯೇ ತನ್ನ 13 ವರ್ಷದ ಮಗಳ ಮೇಲೆ ಅತ್ಯಾಚಾರ ನಡೆಸಿದ್ದಾನೆ ಎಂದು ಬಾಲಕಿಯ ತಾಯಿ ತಿಪಟೂರು ನಗರ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತಿಪಟೂರು ನಗರ ಪೊಲೀಸ್ ಠಾಣೆಯಲ್ಲಿ ತಂದೆಯ ವಿರುದ್ಧ ಪೋಸ್ಕೋ ಪ್ರಕರಣ ದಾಖಲಾಗಿದೆ.

ಇವರದ್ದು ಬಡ ಕುಟುಂಬವಾಗಿದ್ದು, ಪತಿ – ಪತ್ನಿ ಇಬ್ಬರೂ ಕೂಲಿಗಾರರಾಗಿದ್ದಾರೆ. ಆದರೆ, ತಾಯಿ ಕೂಲಿ ಹೋದ ಸಂದರ್ಭದಲ್ಲಿ ಮನೆಯಲ್ಲೇ ಉಳಿಯುತ್ತಿದ್ದ ಪತಿಯು ತನ್ನ ಸ್ವಂತ 13 ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ತಾಯಿ ತನ್ನ ದೂರಿನಲ್ಲಿ ವಿವರಿಸಿದ್ದಾರೆ. ಬಾಲಕಿ 13 ವರ್ಷದವಳಾಗಿದ್ದರಿಂದ ಇದೀಗ ತಿಪಟೂರು ನಗರ ಠಾಣೆ ಪೋಲೀಸರು ತಂದೆಯ ವಿರುದ್ಧ ಪೋಕ್ಸೋ ಪ್ರಕರಣವನ್ನು ದಾಖಲಿಸಿದ್ದಾರೆ.

ಅತ್ತ, ದೂರು ದಾಖಲಾಗುತ್ತಲೇ ತಂದೆಯು ನಾಪತ್ತೆಯಾಗಿದ್ದಾನೆ. ಆತನಿಗಾಗಿ ಪೊಲೀಸರು ಶೋಧ ನಡೆಸಲಾರಂಭಿಸಿದ್ದಾರೆ. ಬಾಲಕಿಗೆ ಲೈಂಗಿಕ ಕಿರುಕುಳ ನೀಡುತ್ತಿರುವುದಾಗಿ ಮೇ 6ರಂದೇ ದೂರು ದಾಖಲಾಗಿತ್ತು. ಆದರೆ, ಈ ಪ್ರಕರಣ ಬೆಳಕಿಗೆ ಬಂದಿದೆ ಎಂದು ಹೇಳಲಾಗುತ್ತಿದೆ.

WhatsApp Group Join Now
Telegram Group Join Now
Share This Article
error: Content is protected !!