Ad imageAd image

ನಾಲ್ಕು ವರ್ಷದ ಬಾಲಕಿ ಮೇಲೆ ಯುವಕನಿಂದ ಅತ್ಯಾಚಾರ

Bharath Vaibhav
ನಾಲ್ಕು ವರ್ಷದ ಬಾಲಕಿ ಮೇಲೆ ಯುವಕನಿಂದ ಅತ್ಯಾಚಾರ
WhatsApp Group Join Now
Telegram Group Join Now

ರಾಯಚೂರು: ನಾಲ್ಕು ವರ್ಷದ ಬಾಲಕಿ ಮೇಲೆ ಇಪ್ಪತ್ತೈದು ವರ್ಷದ ಯುವಕ ಅತ್ಯಾಚಾರವೆಸಗಿದ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನಲ್ಲಿ ನಡೆದಿದ್ದು, ತಡವಾಗಿ ವರದಿಯಾಗಿದೆ.

ಏನಾಯ್ತು?: ತನ್ನ ಮನೆಯ ಬಳಿ ಆಟವಾಡುತ್ತಿದ್ದ ಬಾಲಕಿ, ಆರೋಪಿಯ ಮನೆಯೊಳಗೆ ಹೋಗಿದ್ದಾಳೆ. ಇದನ್ನೇ ದುರುಪಯೋಗಪಡಿಸಿಕೊಂಡ ದುರುಳ ಯುವಕ, ಬಾಲಕಿಗೆ 5 ರೂಪಾಯಿ ಹಣ ನೀಡಿ, ಪುಸಲಾಯಿಸಿ ಅತ್ಯಾಚಾರವೆಸಗಿದ್ದಾನೆ. ಮರುದಿನ ಬಾಲಕಿಯ ಆರೋಗ್ಯದಲ್ಲಿ ಏರುಪೇರಾಗಿದ್ದು, ಪೊಷಕರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಈ ಸಂದರ್ಭದಲ್ಲಿ ಘಟನೆ ಬೆಳಕಿಗೆ ಬಂದಿದ್ದು, ಪೊಲೀಸರಿಗೆ ದೂರು ನೀಡಿದ್ದಾರೆ.

ಪೊಲೀಸರು ಆರೋಪಿಯನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ. ಬಳಗಾನೂರು ಠಾಣೆಯಲ್ಲಿ ಪೋಕ್ಸೊ ಅಡಿ ಎಫ್‌ಐಆರ್ ದಾಖಲಾಗಿದೆ.
WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!