ತುಮಕೂರು : ದೂರು ನೀಡಲು ಬಂದಿದ್ದ ಮಹಿಳೆಯೊಂದಿಗೆ ಠಾಣೆಯಲ್ಲೇ ರಾಸಲೀಲೆ ನಡೆಸಿ ಅಮಾನತ್ತಾಗಿದ್ದ ಡಿವೈಎಸ್ಪಿ ರಾಮಚಂದ್ರಪ್ಪನನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಕಚೇರಿಯಲ್ಲೇ ರಾಸಲೀಲೆಯಲ್ಲಿ ತೊಡಗಿದ್ದ ವಿಡಿಯೋ ಎಲ್ಲೆಡೆ ವೈರಲ್ ಆದ ಬೆನ್ನಲ್ಲೇ ರಾಮಚಂದ್ರಪ್ಪನನ್ನು ಅಮಾನತು ಮಾಡಲಾಗಿತ್ತು.ಬಳಿಕ ನಾಪತ್ತೆಯಾಗಿದ್ದ ಅವನನ್ನು ಈಗ ಮಧುಗಿರಿ ಪೊಲೀಸರು ಬಂಧಿಸಿದ್ದಾರೆ.
ಸಂತ್ರಸ್ತ ಮಹಿಳೆಯಿಂದ ದೂರು ಪಡೆದು ಎಫ್‌ಐಆರ್ ದಾಖಲಿಕೊಂಡಿದ್ದ ಪೊಲೀಸರು, ಆರೋಪಿಯನ್ನು ಬಂಧಿಸಿ ಠಾಣೆಗೆ ಕರೆತಂದಿದ್ದಾರೆ. ಕೆಲವೇ ಕ್ಷಣಗಳಲ್ಲಿ ನ್ಯಾಯಾಧೀಶರ ಮುಂದೆ ಪೊಲೀಸರು ಹಾಜರುಪಡಿಸುವ ಸಾಧ್ಯತೆ ಇದೆ.
ಮಧುಗಿರಿ ಜೆಎಂಎಫ್ಸಿ ಕೋರ್ಟ್ಗೆ ಹಾಜರುಪಡಿಸಲಿರುವ ಪೊಲೀಸರು, ಮೊದಲು ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ಮಾಡಿಸಲಿದ್ದಾರೆ. ಬಳಿಕ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲು ಸಿದ್ಧತೆ ನಡೆಸಿದ್ದಾರೆ.