ಬೆಂಗಳೂರು: ರಾಸಲೀಲೆ ವಿಡಿಯೋ ವೈರಲ್ ಆದ ಬೆನ್ನಲ್ಲೇ ಡಿಜಿಪಿ ರಾಮಚಂದ್ರ ರಾವ್ ಅವರನ್ನು ಸರ್ಕಾರ ಅಮಾನತುಗೊಳಿಸಿ ಆದೇಶ ಹೊರಡಿಸಿದೆ.
ವಿಡಿಯೋ ವೈರಲ್ ಆದ ಬೆನ್ನಲ್ಲೇ ಅವರ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ರಾಮಚಂದ್ರರಾವ್ ಅವರನ್ನು ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.ಡಿಜಿಪಿ ರಾಮಚಂದ್ರ ರಾವ್ ಬೆಳಗಾವಿಯಲ್ಲಿ ಇದ್ದ ಸಂದರ್ಭದಲ್ಲಿನ ವಿಡಿಯೋ ಇದಾಗಿದೆ ಎಂದು ಹೇಳಲಾಗಿದೆ.
ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯ(ಡಿಸಿಆರ್‌ಇ) ಡಿಜಿಪಿ ಕೆ. ರಾಮಚಂದ್ರ ರಾವ್ ಅವರು ತಮ್ಮ ಕಚೇರಿಯಲ್ಲಿ ಮಹಿಳೆಯೊಂದಿಗೆ ಆಸಭ್ಯವಾಗಿ ವರ್ತಿಸಿದ್ದಾರೆ ಎನ್ನಲಾದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಬಗ್ಗೆ ವಿಚಾರಣೆ ನಡೆಸಿ ವರದಿ ಸಲ್ಲಿಸುವಂತೆ ಸಿಎಂ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಎಷ್ಟೇ ದೊಡ್ಡ ಅಧಿಕಾರಿಯಾದರೂ ಕಾನೂನಿಗಿಂತ ದೊಡ್ಡವರಲ್ಲ, ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಶಿಸ್ತು ಕ್ರಮಕ್ಕೆ ಸಿಎಂ ಸೂಚನೆ ನೀಡಿದ್ದರು.
ಡಿಜಿಪಿ ರಾಮಚಂದ್ರ ರಾವ್ ಅವರನ್ನು ಅಮಾನತುಗೊಳಿಸುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ.ಎಂ.ಎ. ಸಲೀಂ ಅವರಿಗೆ ಸಿಎಂ ಸೂಚನೆ ನೀಡಿದ್ದು, ಇದರ ಬೆನ್ನಲ್ಲೇ ಕ್ರಮ ಕೈಗೊಳ್ಳಲಾಗಿದೆ.
ಘಟನೆಯ ಬಗ್ಗೆ ಸಿಎಂ ಗರಂ ಆಗಿದ್ದಾರೆ. ಕಚೇರಿಯಲ್ಲಿ ಅದರಲ್ಲಿಯೂ ಸಮವಸ್ತ್ರ ಧರಿಸಿ ಈ ರೀತಿ ವರ್ತನೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ ಕ್ರಮಕ್ಕೆ ಸೂಚನೆ ನೀಡಿದ್ದಾರೆ. ಈ ಘಟನೆ ಪೊಲೀಸ್ ಇಲಾಖೆಗೆ ಮುಜುಗರ ತಂದಿದ್ದು, ರಾಮಚಂದ್ರರಾವ್ 10 ದಿನ ರಜೆ ಹಾಕಿ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ.




