Ad imageAd image

ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತ : ಕಾರ್ಯಕ್ರಮ ರದ್ದು 

Bharath Vaibhav
ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತ : ಕಾರ್ಯಕ್ರಮ ರದ್ದು 
WhatsApp Group Join Now
Telegram Group Join Now

ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತದಲ್ಲಿ 11 ಆರ್‌ಸಿಬಿ ಅಭಿಮಾನಿಗಳು ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅದ್ಧೂರಿಯಾಗಿ ಆಯೋಜಿಸಿದ್ದ ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆಯನ್ನು ಮೊಟಕುಗೊಳಿಸಲಾಗಿದೆ.

ಅಭಿಮಾನಿಗಳು ಮೃತಪಟ್ಟ ಕಾರಣ ಕೆಲವೇ ನಿಮಿಷಗಳಷ್ಟೇ ಸಂಭ್ರಮಾಚರಣೆಯಲ್ಲಿ ಭಾಗಿಯಾದ ಆರ್‌ಸಿಬಿ ಆಟಗಾರರು ವಾಪಸ್‌ ಹೋಟೆಲ್‌ಗೆ ಮರಳಿದ್ದಾರೆ. ಅಪಾಯ ಹೆಚ್ಚುವ ಆತಂಕದಿಂದ ಈ ಕಾರ್ಯಕ್ರಮವನ್ನು ಆರಂಭಿಸಿದ ಕೆಲವೇ ಕ್ಷಣಗಳಲ್ಲಿ ಮುಕ್ತಾಯಗೊಳಿಸಲಾಗಿದೆ.

ಸಂಭ್ರಮಾಚರಣೆ ಕಾರ್ಯಕ್ರಮ ಮುಕ್ತಾಯಗೊಂಡ ಬಳಿಕ ಮತ್ತೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನೂಕು ನುಗ್ಗಲು ಉಂಟಾಗಿದ್ದು, ಆರ್‌ಸಿಬಿ ಅಭಿಮಾನಿಗಳು ಸ್ಟೇಡಿಯಂನಿಂದ ಹೊರ ಬರಲು ಪರದಾಡಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!