ಜೋಯ್ದಾ: ಹೌದು ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ರಾಮನಗರದ ಕಿತ್ತೂರು ರಾಣಿ ಚನ್ನಮ್ಮನವರ ವಸತಿ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆ ವತಿಯಿಂದ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ, ಹೆಚ್ಚು ಅಂಕ ಪಡೆದ ಎಸ್.ಎಸ್.ಎಲ್.ಸಿ ಮಕ್ಕಳಿಗೆ ಲ್ಯಾಪ್ ಟಾಪ್ ವಿತರಣೆ, ತಾಲ್ಲೂಕು ಪಂಚಾಯಿತಿ ವತಿಯಿಂದ ಅಂಗನವಾಡಿ ಕಾರ್ಯಕರ್ತೆಯರುಗಳಿಗೆ ಕುಕ್ಕರ್ ವಿತರಣೆ ಕಾರ್ಯಕ್ರಮ ದಲ್ಲಿ ಭಾಗವಹಿಸಿ ವಿತರಣೆ ಮಾಡಿ ನಂತರ ನಮ್ಮ ನ್ಯೂಸ್ ಸಮೂಹದ ರಾಜ್ಯದ ಉಪ ಸಂಪಾದಕ ಬಸವರಾಜು ನಡೆಸಿದ ಸಂವಾದದಲ್ಲಿ ಮಾತನಾಡಿದ ಹಳಿಯಾಳ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕಾಂಗ್ರೆಸ್ ಹಿರಿಯ ನಾಯಕರು ಆದ ಶ್ರೀ ಆರ್.ವಿ ದೇಶಪಾಂಡೆಯವರು ಕ್ಷೇತ್ರದ ಅಭಿವೃದ್ಧಿ ಕೆಲಸಗಳು, ಹಳಿಯಾಳ ಪ್ರತ್ಯೇಕ ಜಿಲ್ಲೆ ಹಾಗೂ 2028 ಕ್ಕೆ ಹಳಿಯಾಳ ಕ್ಷೇತ್ರದಿಂದ ಸ್ಪರ್ಧೆ ಬಗ್ಗೆ ಕೇಳಿದ ಪ್ರಶ್ನೆಗಳಿಗೆ ಉತ್ತರ ನೀಡಿದರು.
ಈ ಸಂದರ್ಭದಲ್ಲಿ ಜೋಯ್ದಾ ತಾಲ್ಲೂಕು ಆಡಳಿತ ವರ್ಗದ ಸರ್ವ ಅಧಿಕಾರಿಗಳು, ಸಿಬ್ಬಂದಿವರ್ಗ, ಹಾಗೂ ಅಭಿಯಂತರರು ಹಾಗೂ ಶಿಕ್ಷಕರು, ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.
ವರದಿ: ಬಸವರಾಜು