ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಭ್ರಷ್ಟಾಚಾರ ದೂರು ಆಧರಿಸಿ ಯಡಿಯೂರಪ್ಪ ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಲು ನಿರಾಕರಿಸಿದ್ದ ಈ ಹಿಂದಿನ ನಿರ್ಣಯ ಪುನರ್ ಪರಿಶೀಲಿಸುವಂತೆ ಕೋರಲು ಇತ್ತೀಚೆಗೆ ಸಚಿವ ಸಂಪುಟದಲ್ಲಿ ಕೈಗೊಂಡಿದ್ದ ನಿರ್ಣಯವನ್ನು ರಾಜ್ಯ ಸರ್ಕಾರ ಮಂಗಳವಾರ ರಾಜ್ಯಪಾಲರಿಗೆ ಶಿಫಾರಸು ಮಾಡಿದೆ.
ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ 2020 ರ ನವೆಂಬರ್ 19ರಂದು ಯಡಿಯೂರಪ್ಪ ವಿರುದ್ಧ ಸಲ್ಲಿಸಿದ ಭ್ರಷ್ಟಾಚಾರ ದೂರು ಆಧರಿಸಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಂತೆ ಸರ್ಕಾರ ರಾಜ್ಯಪಾಲರಿಗೆ ಮನವಿ ಮಾಡಿದೆ.
ಯಡಿಯೂರಪ್ಪ ಮತ್ತು ಅವರ ಕುಟುಂಬ ವಿರುದ್ಧದ ಭ್ರಷ್ಟಾಚಾರದ ದೂರಿನಲ್ಲಿ 16 ಗಂಭೀರ ಪ್ರಕರಣಗಳನ್ನು ಮಾಡಲಾಗಿದೆ. ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನಿರಾಕರಿಸಿ 2021ರ ಜೂನ್ 24ರಂದು ಮಾಡಿರುವ ತಮ್ಮ ನಿರ್ಣಯವನ್ನು ಪುನರ್ ಪರಿಶೀಲಿಸಬೇಕೆಂದು ಕೋರಲು ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿತ್ತು. ಅಂತೆಯೇ ಈ ನಿರ್ಣಯವನ್ನು ರಾಜ್ಯಪಾಲರಿಗೆ ಶಿಫಾರಸು ಮಾಡುವ ಮೂಲಕ ಯಡಿಯೂರಪ್ಪ ವಿರುದ್ಧದ ತನಿಖೆಗೆ ಪೂರ್ವಾನುಮತಿ ನೀಡುವಂತೆ ಸರ್ಕಾರ ಕೋರಿದೆ ಎಂದು ಹೇಳಲಾಗಿದೆ.