Ad imageAd image

ಮೂರು ತಿಂಗಳೊಳಗೆ 945 ಹುದ್ದೆಗಳಿಗೆ ನೇಮಕಾತಿ : ಎನ್. ಚಲುವರಾಯಸ್ವಾಮಿ

Bharath Vaibhav
ಮೂರು ತಿಂಗಳೊಳಗೆ 945 ಹುದ್ದೆಗಳಿಗೆ ನೇಮಕಾತಿ : ಎನ್. ಚಲುವರಾಯಸ್ವಾಮಿ
WhatsApp Group Join Now
Telegram Group Join Now

ಬೆಂಗಳೂರು: ಕೃಷಿ ಇಲಾಖೆಯ ಗ್ರೂಪ್ ಬಿ ಮತ್ತು ಸಿ ವೃಂದದ ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ವೃಂದದ 945 ಹುದ್ದೆಗಳಿಗೆ ಮೂರು ತಿಂಗಳೊಳಗೆ ನೇಮಕಾತಿ ನಡೆಸಲಾಗುವುದು ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಕಿರಣ್ ಕುಮಾರ್ ಕೊಡ್ಗಿ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಕೃಷಿ ಇಲಾಖೆಯಲ್ಲಿ ಕೊನೆಯದಾಗಿ 2018ರಲ್ಲಿ 370 ಹುದ್ದೆಗಳಿಗೆ ನೇಮಕಾತಿ ನಡೆದಿದೆ.

ನಂತರ ಇಲಾಖೆಯಲ್ಲಿ ಯಾವುದೇ ನೇಮಕಾತಿ ಆಗಿರಲಿಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕರ್ನಾಟಕ ಲೋಕಸೇವಾ ಆಯೋಗದಿಂದ ನೇರ ನೇಮಕಾತಿ ಮೂಲಕ 945 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿತ್ತು. ಈ ನಡುವೆ ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿಯಾದ ಹಿನ್ನೆಲೆಯಲ್ಲಿ ಸರ್ಕಾರದ ನಿರ್ದೇಶನದ ಮೇರೆಗೆ ಅಧಿಸೂಚನೆ ರದ್ದು ಪಡಿಸಲಾಗಿದೆ ಎಂದು ತಿಳಿಸಿದ್ದಾರೆ.

ಇದೀಗ ಸರ್ಕಾರದ ನಿರ್ದೇಶನದ ಮೇರೆಗೆ ನೇಮಕಾತಿ ಅಧಿಸೂಚನೆ ಹೊರಡಿಸಲು ಪ್ರಸ್ತಾವನೆ ಸಲ್ಲಿಸಲು ಕ್ರಮ ಕೈಗೊಳ್ಳಲಾಗಿದೆ. ಪ್ರತಿ ಐದು ವರ್ಷಗಳಿಗೊಮ್ಮೆ ನೇಮಕಾತಿ ನಡೆದರೆ ಸಿಬ್ಬಂದಿ ಸಮಸ್ಯೆ ಉಂಟಾಗುವುದಿಲ್ಲ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಯಾವುದೇ ನೇಮಕಾತಿ ನಡೆದಿಲ್ಲ. ಎಂಟು ವರ್ಷಗಳ ಬಳಿಕ ನೇಮಕಾತಿ ನಡೆಯುತ್ತಿದ್ದು, ಮೂರು ತಿಂಗಳೊಳಗೆ 945 ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಹೇಳಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!