ಶಿವಮೊಗ್ಗ : ಮುಂದಿನ ಶೈಕ್ಷಣಿಕ ವರ್ಷದಿಂದ ಎಲ್.ಕೆ.ಜಿಯಿಂದ 12ನೇ ತರಗತಿವರೆಗೆ ಉಚಿತ ಪಠ್ಯಪುಸ್ತಕ ಗಳನ್ನು ನೀಡಲಾಗುವುದು ಹಾಗೂ ಉಚಿತ ಪುಸ್ತಕ (ನೋಟ್ ಬುಕ್) ನೀಡುವ ಪ್ರಸ್ತಾವನೆಯು ಸರ್ಕಾರದ ಹಂತದಲ್ಲಿದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.
ನಗರದ ನೆಹರೂ ಕ್ರೀಡಾಂಗಣದಲ್ಲಿ ಸೋಮವಾರ ಏರ್ಪಡಿಸಲಾಗಿದ್ದ ಗಣರಾಜ್ಯೋತ್ಸವ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿ ನಂತರ ಮಾತನಾಡಿದರು.
ಗುಣಮಟ್ಟದ ಶಿಕ್ಷಣಕ್ಕೆ ಶಿಕ್ಷಕರೇ ಆಧಾರ. ನಾವು ಈಗಾಗಲೇ 14,499 ಶಿಕ್ಷಕರನ್ನು ನೇಮಕ ಮಾಡಿಕೊಂಡಿದ್ದೇವೆ. ಶಿಕ್ಷಕರ ಕೊರತೆ ನೀಗಿಸಲು ಪ್ರಥಮ ಬಾರಿಗೆ ನಮ್ಮ ಸರ್ಕಾರ 51000 ಅತಿಥಿ ಶಿಕ್ಷಕರನ್ನುನೇಮಿಸಿದೆ. ಮುಂದಿನ ಶೈಕ್ಷಣಿಕ ವರ್ಷದೊಳಗೆ ಇನ್ನೂ 10,800 ಹೊಸ ಶಿಕ್ಷಕರನ್ನು ಹಾಗೂ ಅನುದಾನಿತ ಶಾಲೆಗಳಿಗೆ ಶಿಕ್ಷಕರ ನೇಮಕಾತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.




