Ad imageAd image

ಕಡ್ಡಾಯವಾಗಿ ಜನನ ಮರಣ ಅಧಿನಿಯಮದಡಿ 21 ದಿನಗಳ ನಿಗಧಿತ ಅವಧಿಯೊಳಗೆ ನೋಂದಣಿ

Bharath Vaibhav
ಕಡ್ಡಾಯವಾಗಿ ಜನನ ಮರಣ ಅಧಿನಿಯಮದಡಿ 21 ದಿನಗಳ ನಿಗಧಿತ ಅವಧಿಯೊಳಗೆ ನೋಂದಣಿ
WhatsApp Group Join Now
Telegram Group Join Now

ಧಾರವಾಡ : –ಕಡ್ಡಾಯವಾಗಿ ಜನನ ಮರಣ ಅಧಿನಿಯಮದಡಿ 21 ದಿನಗಳ ನಿಗಧಿತ ಅವಧಿಯೊಳಗೆ ನೋಂದಣಿ ಮಾಡಿ; ಮೊದಲ ಪ್ರತಿಯನ್ನು ಉಚಿತವಾಗಿ ನೀಡಿ: ಜಿಲ್ಲಾಧಿಕಾರಿ ದಿವ್ಯ ಪ್ರಭು

ಜಿಲ್ಲೆಯ ಎಲ್ಲ ಸರಕಾರಿ, ಖಾಸಗಿ ಆರೋಗ್ಯ ಸಂಸ್ಥೆಗಳಲ್ಲಿ ಜರುಗುವ ಜನನ, ಮರಣ ಘಟನೆಗಳನ್ನು ಕಡ್ಡಾಯವಾಗಿ ಜನನ ಮರಣ ಅಧಿನಿಯಮದಡಿ 21 ದಿನಗಳ ನಿಗಧಿತ ಅವಧಿಯೊಳಗೆ ನೋಂದಣಿ ಕಾರ್ಯ ಕೈಗೊಳ್ಳುವುದು ಯಾವುದೇ ತಡ ನೊಂದಣಿಗೆ ಅವಕಾಶ ನೀಡದೇ ಸಾರ್ವಜನಿಕರಿಗೆ ಜನನ ಮರಣದ ಮೊದಲನೇ ಪ್ರತಿಯನ್ನು ಉಚಿತವಾಗಿ ನೀಡುವಂತೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಸೂಚಿಸಿದರು.

ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಭವನದಲ್ಲಿ ಜಿಲ್ಲಾ ಮಟ್ಟದ ಸಮನ್ವಯ ಸಮಿತಿಯ ಸಭೆ ಜರುಗಿಸಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸರಕಾರಿ, ಖಾಸಗಿ ಆರೋಗ್ಯ ಸಂಸ್ಥೆಗಳಲ್ಲಿ ಜರುಗುವ ಮರಣ ಘಟನೆಗಳಿಗೆ ಮರಣ ಕಾರಣ ವೈದ್ಯಕೀಯ ಪ್ರಮಾಣ ಪತ್ರಗಳನ್ನು ಕಡ್ಡಾಯವಾಗಿ ತಪ್ಪದೇ ಜನನ ಮರಣಗಳ ಮುಖ್ಯ ನೋಂದಣಾಧಿಕಾರಿಗಳು, ಬೆಂಗಳೂರು ಇವರಿಗೆ ನೇರವಾಗಿ ಸಲ್ಲಿಸುವಂತೆ ಹಾಗೂ ಯಾವುದೇ ಮರಣ ಘಟನೆ ಜರುಗದೇ ಇರುವ ಪಕ್ಷದಲ್ಲಿ ಶೂನ್ಯ ವರದಿಯನ್ನು ಸಲ್ಲಿಸುವಂತೆ ಅವರು ಸೂಚಿಸಿದರು.

ಜಿಲ್ಲೆಯ ಎಲ್ಲ ಸರಕಾರಿ, ಖಾಸಗಿ ಆರೋಗ್ಯ ಸಂಸ್ಥೆಗಳ ವೈಧ್ಯಾಧಿಕಾರಿಗಳಿಗೆ ನಿಧಿತ ಅವಧಿಯಲ್ಲಿ ಜನನ ಮರಣಗಳ ವಿವರಗಳನ್ನು ಆನ್‍ಲೈನ್‍ದಲ್ಲಿ ದಾಖಲಿಸಲು ತಿಳಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗೆ ಅವರು ತಿಳಿಸಿದರು. ಮತ್ತು ಜನನ ಮರಣ ನೋಂದಣಿ ಕಾರ್ಯವನ್ನು ವೈದ್ಯಕೀಯ ಸಂಸ್ಥೆಗಳಲ್ಲಿ ಸರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಬಗ್ಗೆ ಗಮನಹರಿಸುವಂತೆ ಸೂಚಿಸಿದರು.

ಜನನ ಮರಣ ನೋಂದಣಿಗಳಲ್ಲಿ ತಿದ್ದುಪಡೆಗೆ ಅವಕಾಶ ನೀಡದೆ ಸರಿಯಾಗಿ ನಿಗಧಿತ ಅವಧಿಯೊಳಗೆ ನೋಂದಣಿ ಕಾರ್ಯ ಕೈಗೊಂಡು ಸಾರ್ವಜಕನಿಕರಿಗೆ ತೊಂದರೆಯಾಗದಂತೆ ಜನನ ಮರಣ ಪ್ರಮಾಣ ಪತ್ರಗಳನ್ನು ನಿಗಧಿ ಅವಧಿಯೊಳಗೆ ನೀಡುವಂತೆ ಕ್ರಮಕೈಗೊಳ್ಳಲು ಜಿಲ್ಲಾಧಿಕಾರಿಗಳು ನಿರ್ದೇಶಿಸಿದರು.

ಜಿಲ್ಲೆಯಲ್ಲಿ ಜುಲೈ 1, 2024 ರಿಂದ ಗ್ರಾಮೀಣ ಭಾಗದ ಎಲ್ಲಾ ಗ್ರಾಮ ಪಂಚಾಯತಿ ಕಾರ್ಯದರ್ಶಿಗಳನ್ನು ಜನನ ಮರಣಗಳ ಉಪನೋಂದಣಾಧಿಕಾರಿಗಳನ್ನಾಗಿ ಸರ್ಕಾರವು ನೇಮಿಸಿದ್ದು, ಜುಲೈ-2024 ರೊಳಗೆ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತಿಗಳಲ್ಲಿ 375 ಅರ್ಜಿಗಳು ಸ್ವೀಕೃತವಾಗಿದ್ದು ಅವುಗಳ ಪೈಕಿ 311 ಅರ್ಜಿಗಳ ಅನುಮೋದನೆಯಾಗಿ ಮರಣ ಪ್ರಮಾಣ ಪತ್ರಗಳನ್ನು ವಿತರಿಸಿರುವ ಕುರಿತು ಕ್ರಮಕೈಗೊಳ್ಳಲು ಜಿಲ್ಲಾಧಿಕಾರಿಗಳು ಸೂಚಿಸಿದರು.

ಜಿಲ್ಲೆಯಲ್ಲಿ ಹೊಸದಾಗಿ ಗ್ರಾಮ ಪಂಚಾಯತಿ ಕಾರ್ಯದರ್ಶಿಗಳಿಗೆ ಜನನ ಮರಣ ಉಪನೋಂದಣಾಧಿಕಾರಿಗಳನ್ನಾಗಿ ನೇಮಿಸಿರುವ ಹಾಗೂ ಜನನ ಮರಣ ನೋಂದಣಿ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವುದಕ್ಕಾಗಿ ಗ್ರಾಮ ಪಂಚಾಯತಿಯಲ್ಲಿ ಇರುವ ಸ್ವಚ್ಚತಾ ವಾಹಿನಿ ಮುಖಾಂತರ ಮತ್ತು ಡಂಗೂರ ಸಾರುವ ಮುಖಾಂತರ, ಗ್ರಾಮ ಸಭೆಯಲ್ಲಿ ಸಾರ್ವಜನಿಕರಿಗೆ ಅರಿವು ಮೂಡುವಂತೆ ಧಾರವಾಡ ಜಿಲ್ಲಾ ಪಂಚಾಯತಿಯ ಉಪ ಕಾರ್ಯದರ್ಶಿಗಳಿಗೆ ಜಿಲ್ಲಾಧಿಕಾರಿಗಳು ತಿಳಿಸಿದರು.

ಸಭೆಯ ಪ್ರಾರಂಭದಲ್ಲಿ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳಾದ ಶ್ರೀ ವಿ ವೈ ಪಾಟೀಲ್ ಇವರು ಸಭೆಯಲ್ಲಿ ಹಾಜರಿದ ಸಮನ್ವಯ ಸಮಿತಿಯ ಎಲ್ಲ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಸ್ವಾಗತ ಕೋರಿದರು. ನಂತರ ಸದರಿ ಸಭೆಯನ್ನು ಮುಂದುವರೆಸುವಂತೆ ಮಾನ್ಯ ಜಿಲ್ಲಾಧಿಕಾರಿಗಳಿಗೆ ಕೋರಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಬಿ.ಎಸ್.ಮುಗನೂರಮಠ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಶಶಿ ಪಾಟೀಲ, ಮಹಿಳಾ ಮತ್ತು ಮಕ್ಕಳ ಅಭಿವೃಧ್ಧಿ ಇಲಾಖೆ ಉಪನಿರ್ದೇಶಕಿ ಡಾ. ಕುಕನೂರ, ತಾಲೂಕ ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿಗಳು, ಪಟ್ಟಣ ಪಂಚಾಯತಿ ಮತ್ತು ಪುರಸಭೆಗಳ ಮುಖ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ವರದಿ:ವಿನಾಯಕ ಗುಡ್ಡದಕೇರಿ

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!