ನವದೆಹಲಿ: ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ರಚನೆಯಾದ ಮರುದಿನವೇ ರಾಜ್ಯಕ್ಕೆ 5096 ಕೋಟಿ ರೂ. ತೆರಿಗೆ ಪಾಲು ಬಿಡುಗಡೆ ಮಾಡಲಾಗಿದೆ.
ಸರ್ಕಾರ ರಚಿಸಿದ ಮರುದಿನವೇ ಪ್ರಸಕ್ತ ಹಣಕಾಸು ವರ್ಷದಲ್ಲಿ ಜೂನ್ ತಿಂಗಳ ರಾಜ್ಯಗಳ ತೆರಿಗೆ ಪಾಲನ್ನು ಕೇಂದ್ರ ಹಣಕಾಸು ಸಚಿವಾಲಯ ಬಿಡುಗಡೆಗೊಳಿಸಿದ್ದು, ರಾಜ್ಯಕ್ಕೆ 5096.72 ಕೋಟಿ ರೂ.
ನೀಡಲಾಗಿದೆ. 2024ರ ಜೂನ್ ನಲ್ಲಿ ಒಟ್ಟು 1.39.750 ಕೋಟಿ ರೂ. ರಾಜ್ಯಗಳ ಪಾಲನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ್ದು, ಇದರಿಂದ ರಾಜ್ಯ ಅಭಿವೃದ್ಧಿ ಮತ್ತು ಬಂಡವಾಳ ವೆಚ್ಚ ವೇಗ ಪಡೆದುಕೊಳ್ಳಲಿದೆ.
2024 -25ರ ಮಧ್ಯಂತರ ಬಜೆಟ್ ನಲ್ಲಿ ರಾಜ್ಯಗಳಿಗೆ ತೆರಿಗೆ ಹಂಚಿಕೆಯಾಗಿ 12.19.793 ಕೋಟಿ ರೂ. ಪ್ರಸ್ತಾವನೆ ಒಳಗೊಂಡಿದೆ. ಇದುವರೆಗೆ 2,79,500 ಕೋಟಿ ರೂ.ಗಳನ್ನು ರಾಜ್ಯಗಳಿಗೆ ಹಂಚಿಕೆ ಮಾಡಲಾಗಿದೆ.
ಕೇಂದ್ರದಿಂದ ಯಾವುದೇ ವಿಶೇಷ ಅನುದಾನ ನೀಡಿಲ್ಲ. ರಾಜ್ಯದ ಪಾಲನ್ನು ಪ್ರಸಾದದ ರೀತಿ ಹಂಚಲಾಗಿದೆ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಪ್ರತಿಕ್ರಿಯೆ ನೀಡಿದ್ದಾರೆ.