Ad imageAd image

ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯ ಸ್ಥಳಾಂತರ.

Bharath Vaibhav
ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯ ಸ್ಥಳಾಂತರ.
WhatsApp Group Join Now
Telegram Group Join Now

ಸೇಡಂ : ತಾಲೂಕಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿರುವ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯಕ್ಕೆ ಅಂಗವಿಕಲರಿಗೂ ಹಾಗೂ ಗರ್ಭಿಣಿ ಮಹಿಳೆಯರಿಗೆ ಮತ್ತು ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ಕಾರ್ಯಾಲಯಕ್ಕೆ ಭೇಟಿ ನೀಡಬೇಕಾದರೆ ರೈಲ್ವೆ ಪಟ್ಟಿ ದಾಟಿಹೋಗಲು ಸುಮಾರು ವರ್ಷಗಳಿಂದ ತುಂಬಾ ಸಮಸ್ಯೆ ಆಗುತ್ತಿರುವುದರಿಂದ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಅಂಬೇಡ್ಕರ್ ಯುವ ಸೇನೆ ತಾಲೂಕು ಅಧ್ಯಕ್ಷರಾದ ಗೋಪಾಲ್ ಎಲ್ ನಾಟೇಕಾರ್ ಮತ್ತು ಅಂಬೇಡ್ಕರ್ ಸೇವಾ ಸಮಿತಿ ಕರ್ನಾಟಕ ತಾಲೂಕ ಅಧ್ಯಕ್ಷರಾದ ಈಶ್ವರಾಜ ಮಾಧವಾರ ರವರು ಜಿಲ್ಲಾಧಿಕಾರಿಗಳಿಗೆ ಹಾಗೂ ಉಪನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ರವರಿಗೆ ಮನವಿ ಸಲ್ಲಿಸಿರುವ ಪ್ರಯುಕ್ತ ಜಿಲ್ಲಾಧಿಕಾರಿಗಳು ಹಾಗೂ ಉಪನಿರ್ದೇಶಕರು ಮನವಿಗೆ ಸ್ಪಂದಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಆದೇಶದ ಮೇರೆಗೆ ಸೇಡಂ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯವನ್ನು ಕೃಷಿ ಉತ್ಪನ್ನ ಮಾರುಕಟ್ಟೆಯಿಂದ ತಾಲ್ಲೂಕ ಆಡಳಿತ ಸೌಧದಲ್ಲಿ ಎರಡನೇ ಮಹಡಿಯಲ್ಲಿ ಸ್ಥಳಾಂತರ ಮಾಡಲಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ : ವೆಂಕಟಪ್ಪ ಕೆ ಸುಗ್ಗಾಲ್.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!