ಬೆಂಗಳೂರು : ಕನ್ನಡದ ಖ್ಯಾತ ಲೇಖಕಿ, ಕಾದಂಬರಿಗಾರ್ತಿ `ಆಶಾ ರಘು’ ಅವರು ಇಂದು ನಿಧನರಾಗಿದ್ದಾರೆ.ಆಶಾ ರಘು ಅವರು ಕೇಶವ ಅಯ್ಯಂಗಾರ್ ಹಾಗೂ ಸುಲೋಚನ ದಂಪತಿಗಳ ಹಿರಿಯ ಮಗಳಾಗಿ 1979ರ ಜೂನ್ 18 ರಂದು ಬೆಂಗಳೂರಿನಲ್ಲಿ ಜನಿಸಿದರು. ಇವರು ಬೆಂಗಳೂರು ವಿಶ್ವವಿದ್ಯಾಲಯದಿಂದ ಕನ್ನಡ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.
ಉಪನ್ಯಾಸಕರಾಗಿ ಕೆಲಕಾಲ ಕಾರ್ಯ ನಿರ್ವಹಿಸಿರುವ ಇವರು, ರಂಗಭೂಮಿ, ಕಿರುತೆರೆ, ಬೆಳ್ಳಿತೆರೆಗಳಲ್ಲಿಯೂ ಕಲಾವಿದೆಯಾಗಿ, ಸಂಭಾಷಣೆಕಾರರಾಗಿ, ಸಹಾಯಕ ನಿರ್ದೇಶಕರಾಗಿ ಕೂಡ ಕಾರ್ಯ ನಿರ್ವಹಿಸಿದ್ದಾರೆ.




