ಮುಂಬೈ : ದೇಶದ ಖ್ಯಾತ ಗಾಯಕ ಸೋನು ನಿಗಮ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನಿನ್ನೆ ನಡೆದ ಲೈವ್ ಪ್ರದರ್ಶನದ ಸಮಯದಲ್ಲಿ ಅವರು ತೀವ್ರ ಬೆನ್ನುನೋವಿನಿಂದ ಬಳಲುತ್ತಿದ್ದರು. ತೀವ್ರ ಬೆನ್ನುನೋವಿನ ಹೊರತಾಗಿಯೂ ಅವರು ತಮ್ಮ ಪ್ರದರ್ಶನವನ್ನು ಮುಂದುವರಿಸಿದರು.
ಆದರೆ ನೋವು ಹೆಚ್ಚಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಯಿತು. ಈ ಸಂದರ್ಭದಲ್ಲಿ, ಅವರು ತಮ್ಮ ಆರೋಗ್ಯದ ಬಗ್ಗೆ ಮಾತನಾಡುವ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಸೋನು ನಿಗಮ್ ಆಸ್ಪತ್ರೆಯ ಹಾಸಿಗೆಯಿಂದ ವೀಡಿಯೊವನ್ನು ಹಂಚಿಕೊಂಡಿದ್ದಾರೆ.




