ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಎಸಿಪಿ ಚಂದನ್ ಕುಮಾರ್ ಅವರು, FSL ವರದಿಗಳು ಹಾಗೂ ರಿಟ್ರಿವ್ ಮಾಡಿದ ಭಾವಚಿತ್ರಗಳು ಸೇರಿದಂತೆ ಒಟ್ಟು 1,300 ಪುಟಗಳ ಹೆಚ್ಚುವರಿ ಚಾರ್ಜ್ ಶೀಟ್ ಅನ್ನು ಇಂದು ನ್ಯಾಯಾಲಯಕ್ಕೆ ಸಲ್ಲಿಸಿದರು.
ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬರೋಬ್ಬರಿ 1,300 ಪುಟಗಳ ಅಡಿಷನಲ್ ಚಾರ್ಜ್ ಶೀಟ್ ಇದೀಗ ಸಲ್ಲಿಕೆಯಾಗಿದೆ. FSL ರಿಪೋರ್ಟ್, ಕೆಲ ಪ್ರಮುಖ ಸಾಕ್ಷಿಗಳ ಹೇಳಿಕೆಗಳು ಹಾಗೂ ಪುನೀತ್ ಮೊಬೈಲ್ ನಿಂದ ರಿಟ್ರಿವ್ ಮಾಡಲಾದ 8 ಫೋಟೋ ಸೇರಿದಂತೆ ಮಹತ್ವದ ಅಂಶಗಳನ್ನು ಒಳಗೊಂಡಿರುವ ಹೆಚ್ಚುವರಿ ಚಾರ್ಜ್ ಶೀಟ್ ಇದೀಗ ACP ಚಂದನ್ ಕುಮಾರ್ ಕೋರ್ಟಿಗೆ ಸಲ್ಲಿಕೆ ಮಾಡಿದ್ದಾರೆ.
ಇನ್ನೊಂದು ಕಡೆ ನಟ ದರ್ಶನ್ ಅವರು ಬೆಂಗಳೂರಿನ ಕೆಂಗೇರಿ ಬಳಿ ಇರುವ ಬಿಜೆಪಿ ಆಸ್ಪತ್ರೆಗೆ ಬೆನ್ನು ನೋವಿನ ಸಮಸ್ಯೆ ತಿಳಿಸಿ ಆಸ್ಪತ್ರೆಗೆ ದಾಖಲಾಗಿದ್ದರೂ ಕೂಡ ಇದುವರೆಗೂ ಶಸ್ತ್ರಚಿಕಿತ್ಸೆಗೆ ಒಳಗಾಗದೆ ದಿನ ದೂಡುತ್ತಿದ್ದಾರೆ. ಅಲ್ಲದೆ ಇತ್ತೀಚಿಗೆ ದರ್ಶನ್ ಪರ ವಕೀಲರು ಕೂಡ ನಟ ದರ್ಶನ್ ಅವರ ವೈದ್ಯಕೀಯ ವರದಿಯನ್ನು ಸಲ್ಲಿಸಿತ್ತು.
ಇನ್ನು ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಗೃಹ ಸಚಿವ ಜಿ ಪರಮೇಶ್ವರ್ ಅವರು ನಟ ದರ್ಶನ್ ಅವರಿಗೆ ಬೇಲ್ ನೀಡಬಾರದು ಎಂದು ನಾವು ಸುಪ್ರೀಂಕೋರ್ಟಿಗೆ ಅರ್ಜಿ ಸಲ್ಲಿಸುತ್ತೇವೆ. ಅಕಸ್ಮಾತ್ ಅವರು ಶಾಸ್ತ್ರ ಚಿಕಿತ್ಸೆಗೆ ಒಳಗಾಗಿ ಗುಣಮುಖರಾದರು ಬಳಿಕ ಮತ್ತೆ ಜೈಲಿಗೆ ಹೋಗಬೇಕಾಗುತ್ತದೆ ಎಂದು ಗೃಹ ಸಚಿವಾಜಿ ಪರಮೇಶ್ವರ ತಿಳಿಸಿದರು.