ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಾಮೀನಿನ ಬಿಡುಗಡೆಯಾಗಿರುವ ನಟಿ ಪವಿತ್ರ ಗೌಡ ಟೆಂಪಲ್ ರನ್ ನಲ್ಲಿ ಫುಲ್ ಬ್ಯುಸಿ ಆಗಿದ್ದು, ಇದೀಗ ಉತ್ತರ ಪ್ರದೇಶ ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭ ಮೇಳದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ.
ರೇಣುಕಾಸ್ವಾಮಿ ಕೊಲೆಯಲ್ಲಿ ಪ್ರಕರಣದಲ್ಲಿ 6 ತಿಂಗಳುಗಳ ಕಾಲ ಪರಪ್ಪನ ಅಗ್ರಹಾರದಲ್ಲಿ ಜೈಲುವಾಸ ಅನುಭವಿಸಿದ್ದ ಪವಿತ್ರಾ ಗೌಡ ಪ್ರಯಾಗರಾಜ್ ನ ಸಂಗಮ ಘಾಟ್ ನಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ. ಅಮಾವಾಸ್ಯಯಂದು ಶಾಹಿ ಸ್ನಾನದ ಪುಣ್ಯ ಸಿಕ್ಕ ನಾನೆ ಧನ್ಯಾಳು ಎಂದು ಪೋಸ್ಟ್ ಮಾಡಿದ್ದಾರೆ.
ಜೈಲಿನಿಂದ ಬಳಿಕ ಸೋಶಿಯಲ್ ಮೀಡಿಯಾದಲ್ಲಿದ ಆಕ್ಟಿವ್ ಆಗಿರುವ ಪವಿತ್ರ ಗೌಡ ಗಂಗಾ ನದಿಯ ತೀರದಲ್ಲಿ ಬೋಟ್ ನಲ್ಲಿ ಎಂಜಾಯ್ ಮಾಡುತ್ತಿರುವ ವಿಡಿಯೋ ಹಂಚಿಕೊಂಡಿದ್ದು, ಹರ ಹರ ಮಹದೇವ ಎಂದು ತಮ್ಮ ಪೋಸ್ಟ್ನಲ್ಲಿ ಬರೆದಿದ್ದಾರೆ. ಸದ್ಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ.