ಸೇಡಂ:- ಕರ್ನಾಟಕ ಲೋಕಸೇವಾ ಆಯೋಗದಿಂದ ನವಂಬರ್ 17ರಂದು ಹೈದರಾಬಾದ್-ಕರ್ನಾಟಕ ವೃಂದದ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ (PDO) ಪರೀಕ್ಷೆಯನ್ನು ನಿಗದಿಗೊಳಿಸಲಾಗಿತ್ತು. ಆದರೆ, ಪರೀಕ್ಷೆಗೂ ಮುನ್ನವೇ ರಾಯಚೂರಿನ ಸಿಂಧನೂರು ನಗರದ ಪದವಿ ಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದೆ.
ಜೊತೆಗೆ ಒಂದು ಪ್ರಶ್ನೆ ಪತ್ರಿಕೆ ಬಂಡಲ್ಲಿನಲ್ಲಿ 24 ಪ್ರಶ್ನೆ ಪತ್ರಿಕೆಗಳಿಗೆ ಬದಲಾಗಿ ಕೇವಲ 12 ಪ್ರಶ್ನೆ ಪತ್ರಿಕೆಗಳು ಮಾತ್ರ ಇದೆ. ಈ ಒಂದು ಘಟನೆಯು ಆಯೋಗವು ಯಾವ ರೀತಿಯ ಪರೀಕ್ಷಾ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂಬುದಕ್ಕೆ ಒಂದು ಸಣ್ಣ ನಿದರ್ಶನವಾಗಿದೆ. ಈ ಕೂಡಲೇ ಆಯೋಗವು ತನ್ನ ತಪ್ಪನ್ನು ಒಪ್ಪಿಕೊಂಡು ತಕ್ಷಣ ಪತ್ರಿಕಾ ಪ್ರಕಟಣೆ ಹೊರಡಿಸುವುದರ ಮೂಲಕ ಮರು ಪರೀಕ್ಷೆ ನಡೆಸಬೇಕು.
ಬಿಎಸ್ಪಿ ಪಕ್ಷ ಇಂತಹ ಕರ್ತವ್ಯ ಲೋಪ ಮತ್ತು ಭ್ರಷ್ಟಾಚಾರದ ವಿರುದ್ಧ ನಿರಂತರವಾಗಿ ಧ್ವನಿ ಎತ್ತುತ್ತದೆ ಮತ್ತು ಯಾವ ಅಭ್ಯರ್ಥಿಗೂ ಅನ್ಯಾಯವಾಗುವುದನ್ನು ಸಹಿಸುವುದಿಲ್ಲ. ಈ ಕೂಡಲೇ ಮರು ಪರೀಕ್ಷೆಗೆ ಸರ್ಕಾರ ಆದೇಶ ನೀಡಬೇಕೆಂದು ಬಹುಜನ ಸಮಾಜ ಪಾರ್ಟಿ ಲಕ್ಷಾಂತರ ಉದ್ಯೋಗ ಆಕಾಂಕ್ಷಿಗಳ ಪರವಾಗಿ ಆಗ್ರಹಿಸುತ್ತಿದೆ ಎಂದು ಬಹುಜನ ಸಮಾಜ ಪಕ್ಷದ ತಾಲೂಕ ಅಧ್ಯಕ್ಷರಾದ ರೇವಣಸಿದ್ಧ ಎಸ್ ಶಿಂದೆ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ :-ವೆಂಕಟಪ್ಪ ಕೆ ಸುಗ್ಗಾಲ್.