Ad imageAd image

ಮಾಹಿತಿ ಹಕ್ಕು ಮತ್ತು ಕಾನೂನು ಅರಿವು ಕಾರ್ಯಾಗಾರ.

Bharath Vaibhav
ಮಾಹಿತಿ ಹಕ್ಕು ಮತ್ತು ಕಾನೂನು ಅರಿವು ಕಾರ್ಯಾಗಾರ.
WhatsApp Group Join Now
Telegram Group Join Now

ರಾಯಚೂರು : ರಾಜ್ಯದಲ್ಲಿ ಭ್ರಷ್ಟಾಚಾರದ ವಿರುದ್ಧ ನಿರಂತರವಾಗಿ ಹೋರಾಡುತ್ತಾ ಬಂದಿರುವ ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆಯು ನಾಡಿನ ಜನರನ್ನು ಸಬಲೀಕರಣ ಕಾರ್ಯದಲ್ಲೂ ನಿರತವಾಗಿದೆ. ಜನರಿಗೆ ಅವರ ಹಕ್ಕುಗಳು ಮತ್ತು ಕಾನೂನನ್ನು ತಮ್ಮ ಸಂವಿಧಾನಬದ್ಧ ರಕ್ಷಣೆ ಹಾಗೂ ಸರ್ಕಾರಿ ಕೆಲಸ ಮಾಡಿಸಿಕೊಳ್ಳುವಲ್ಲಿ ಹೇಗೆ ಬಳಸಿಕೊಳ್ಳಬಹುದೆಂಬ ವಿಚಾರಗಳನ್ನು ತಿಳಿಸುತ್ತಾ ನೆರವಾಗುತ್ತಾ ಬಂದಿದೆ.

ಈ ನಿಟ್ಟಿನಲ್ಲಿ ವೇದಿಕೆಯು ರಾಜ್ಯಾದ್ಯಂತ ಮಾಹಿತಿ ಹಕ್ಕು ಕಾಯ್ದೆ, ಸಕಾಲ ಮತ್ತು ಕಾನೂನು ಅರಿವು, ತರಬೇತಿ ಶಿಬಿರ/ ಕಾರ್ಯಾಗಾರಗಳನ್ನು ನಡೆಸಿಕೊಂಡು ಬರುತ್ತಿದೆ ಮತ್ತು ಮುಂದಿನ ತಿಂಗಳುಗಳಲ್ಲಿ ಬೇರೆ ಬೇರೆ ಜಿಲ್ಲೆಗಳಲ್ಲಿಯೂ ಈ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ.

ಈ ರೀತಿಯ ಕಾರ್ಯಕ್ರಮದ ಅಂಗವಾಗಿ ಇದೇ ಫೆಬ್ರವರಿ 15ರ ಶನಿವಾರದಂದು ರಾಯಚೂರಿನಲ್ಲಿ ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆಯ ವತಿಯಿಂದ ಭ್ರಷ್ಟಾಚಾರ ಮತ್ತು ಪ್ರಜಾಪ್ರಭುತ್ವ ಕುರಿತ ವಿಚಾರ ಸಂಕಿರಣ, ಮಾಹಿತಿ ಹಕ್ಕು ಕಾಯ್ದೆ ಮತ್ತು ಕಾನೂನು ಅರಿವು ಕಾರ್ಯಾಗಾರ ಹಾಗೂ ನಾಡಪ್ರೇಮಿ ಹೋರಾಟಗಾರರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

ಈ ಕಾರ್ಯಕ್ರಮವು ರಾಯಚೂರಿನ ಅಂಬೇಡ್ಕರ್ ವೃತ್ತದ ಸಮೀಪವಿರುವ ಕರ್ನಾಟಕ ರಾಜ್ಯ ನೌಕರರ ಭವನದಲ್ಲಿ ಬೆಳಗ್ಗೆ ಗಂಟೆ 10:30 ರಿಂದ ಸಂಜೆ 4:30ರ ತನಕ ನಡೆಯಲಿದೆ. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ನಾಡಿನ ಹಿರಿಯ ಹೋರಾಟಗಾರರು ಮತ್ತು ಚಿಂತಕರಾದ ಎಸ್. ಆರ್. ಹಿರೇಮಠ್ ಅವರು ಆಗಮಿಸುತ್ತಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಯನ್ನು ವೇದಿಕೆಯ ಗೌರವಾಧ್ಯಕ್ಷರಾದ ರವಿ ಕೃಷ್ಣಾರೆಡ್ಡಿ ಅವರು ನೆರವೇರಿಸಲಿದ್ದಾರೆ. ಈ ಸಂದರ್ಭದಲ್ಲಿ ನಾಡಿನ ಹಿರಿಯ ಸಾಮಾಜಿಕ ಹೋರಾಟಗಾರರಾದ ಶ್ರೀ ರಾಘವೇಂದ್ರ ಕುಷ್ಟಗಿ ಅವರನ್ನು ಸನ್ಮಾನಿಸಲಾಗುವುದು.

ನಿರುಪಾದಿ ಕೆ ಗೋಮರ್ಸಿ
ಕಾರ್ಯಕಾರಿ ಸಮಿತಿ ಸದಸ್ಯ,
ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆ.

ವರದಿ : ದಾವಲ್ ಶೇಡಂ

WhatsApp Group Join Now
Telegram Group Join Now
Share This Article
error: Content is protected !!