ಬಳ್ಳಾರಿ : ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಾಲಾಟೆ ಹಾಗೂ ಫೈರಿಂಗ್ ನಲ್ಲಿ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಎಂಬುವವರು ಗುಂಡೇಟು ತಗುಲಿ ಸಾವನ್ನಪ್ಪಿದ್ದು, ಸಚಿವ ಜಮೀರ್ ಅಹ್ಮದ್ ಖಾನ್ ಮೃತನ ಕುಟುಂಬಕ್ಕೆ ಪರಿಹಾರ ನೀಡಿದ್ದಾರೆ.
ಬಳ್ಳಾರಿ ಗಲಾಟೆಯಲ್ಲಿ ಮೃತಪಟ್ಟ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಅವರ ಹುಸೇನ್ ನಗರದಲ್ಲಿರುವ ನಿವಾಸಕ್ಕೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ವಸತಿ ಸಚಿವ ಜಮೀರ್ ಅಹ್ಮದ್, ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದರು.
ಇದೇ ವೇಳೆ ಮೃತರ ಕುಟುಮ್ಬಕ್ಕೆ 25 ಲಕ್ಷ ರೂಪಾಯಿ ಪರಿಹಾರ ನೀಡಿದರು. ಕುಟುಂಬದ ಜೊತೆ ಕಾಂಗ್ರೆಸ್ ಪಕ್ಷ ಸರ್ಕಾರ ಸದಾ ಇರಲಿದೆ ಎಂದು ಭರವಸೆ ನೀಡಿದರು. ರಾಜಶೇಖರ್ ಕುಟುಂಬಕ್ಕೆ ಮನೆ ಕಟ್ಟಿ ಕೊಡಲಾಗುವುದು. ಪಕ್ಷದ ವತಿಯಿಂದಲೂ ನೆರವು ನೀಡಲಾಗುವುದು ಎಂದು ತಿಳಿಸಿದರು




