ಬೆಂಗಳೂರು: ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಶೆಟ್ಟಿಹಳ್ಳಿ ವಾರ್ಡಿನ ಕೃಷ್ಣ ನಗರ ಮತ್ತು ಆದರ್ಶ ನಗರಗಳ ರಸ್ತೆಗಳ ಡಾಂಬರೀಕರಣ ಕಾಮಗಾರಿಗೆ ಕ್ಷೇತ್ರದ ಶಾಸಕ ಎಸ್ ಮುನಿರಾಜು ಚಾಲನೆ ನೀಡಿದರು.
ನಂತರ ಅವರು ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷವಾಯಿತು. ಅಂದರೆ ಅಭಿವೃದ್ಧಿ ಕಾರ್ಯಗಳು ಶೂನ್ಯ! ಈ ಸರಕಾರದಿಂದ ಜನ ಸಾಮಾನ್ಯರ ಬದುಕು ಮುರಾಬಟಿ ಆಗಿದೆ. ದಿನ ನಿತ್ಯ ಬಳಸುವ ವಸ್ತುಗಳ ಬೆಲೆ ಗಗನಕ್ಕೇರುತ್ತಿದೆ ಉದಾಹರಣೆ, ಪೆಟ್ರೋಲ್ ಡೀಸೆಲ್, ಹಾಲು ಸೇರಿದಂತೆ ದಿನ ಬಳಿಕೆ ವಸ್ತುಗಳ ಬೆಲೆ ದುಬಾರಿ ಮಾಡಿದ್ದು ಕಾಂಗ್ರೆಸ್ ಸರ್ಕಾರ, ನೀರಿನ ಮತ್ತು ವಿದ್ಯುತ್ ಬಿಲ್ ಏರಿಕೆ ಮಾಡಿ ಬಡವರ ಹೊಟ್ಟೆಗೆ ಬರೆ ಎಳೆಯುವ ಕೆಲಸ ಸಿದ್ದರಾಮಯ್ಯನ ಸರ್ಕಾರ ಮಾಡುತ್ತಿದೆ ಎಂದು ಶಾಸಕ ಎಸ್ ಮುನಿರಾಜು ಕಾಮಗಾರಿಗೆ ಚಾಲನೆ ನೀಡಿ ಸಾರ್ವಜನಿಕರಿಗೆ ಕಾಂಗ್ರೆಸ್ ಆಡಳಿತ ಬಗ್ಗೆ ಮನವರಿಕೆ ಮಾಡಿಕೊಟ್ಟರು.
ಈ ಸಂದರ್ಭದಲ್ಲಿ ಶೆಟ್ಟಿಹಳ್ಳಿ ವಾರ್ಡಿನ ಬಿಜೆಪಿ ಅಧ್ಯಕ್ಷ ಬಿ. ಸುರೇಶ್, ಮಂಜುನಾಥ್, ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಸೋಮಶೇಖರ್, ಗುತ್ತಿಗೆದಾರ ಲಕ್ಷ್ಮಣ್, ಬಿಬಿಎಂಪಿ ಇಂಜಿನಿಯರ್ ಹಾಗೂ ಸಿಬ್ಬಂದಿ ವರ್ಗದವರು ಸಮಸ್ತ ನಾಗರಿಕ ಬಂಧು ಭಗನಿಯರು ಇದ್ದರು.
ವರದಿ: ಅಯ್ಯಣ್ಣ ಮಾಸ್ಟರ್