ಮುಂಬೈ : ಬಾಲಿವುಡ್ ಹಿರಿಯ ನಟ ಧರ್ಮೇಂದ್ರ (89) ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ‘ಬಾಲಿವುಡ್ ಹೀ ಮ್ಯಾನ್’ ಎಂದೇ ಖ್ಯಾತಿಯಾಗಿದ್ದ ಧರ್ಮೇಂದ್ರ ನಿಧನಕ್ಕೆ ಹಲವು ನಟರು ಕಂಬನಿ ಮಿಡಿದಿದ್ದಾರೆ.
ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ 89 ವರ್ಷದ ಧರ್ಮೇಂದ್ರ ಅವರು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದರು.
ನಂತರ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿತ್ತು. ನಂತರ ಅವರನ್ನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿತ್ತು. ಆದರೆ ಇಂದು ನಟ ಧರ್ಮೇಂದ್ರ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ಇತ್ತೀಚೆಗೆ ಅವರ ಸಾವಿನ ವದಂತಿಗಳು ಹರಡಿದ್ದು, ನಂತರ ಕುಟುಂಬ ಈ ಸುದ್ದಿಯನ್ನು ನಿರಾಕರಿಸಿತ್ತು.
ವಿಲೇ ಪಾರ್ಲೆ ಸ್ಮಶಾನಕ್ಕೆ ಧರ್ಮೇಂದ್ರ ಕುಟುಂಬ ಹಾಗೂ ಬಾಲಿವುಡ್ ನಟ ಅಮೀರ್ ಖಾನ್ ಸೇರಿದಂತೆ ಮತ್ತಿತರರು ಆಗಮಿಸುತ್ತಿದ್ದಾರೆ.




