Ad imageAd image

ಹಿಂದೂಳಿದ, ದಲಿತ ಸೇರಿದಂತೆ ಎಲ್ಲ ಸಮಾಜದವರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಧ್ವನಿಯಾಗಲು ಸಾಧುಸಂತರು

Bharath Vaibhav
ಹಿಂದೂಳಿದ, ದಲಿತ ಸೇರಿದಂತೆ ಎಲ್ಲ ಸಮಾಜದವರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಧ್ವನಿಯಾಗಲು ಸಾಧುಸಂತರು
WhatsApp Group Join Now
Telegram Group Join Now

ಹುಬ್ಬಳ್ಳಿ:- ಹಿಂದೂಳಿದ, ದಲಿತ ಸೇರಿದಂತೆ ಎಲ್ಲ ಸಮಾಜದವರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಧ್ವನಿಯಾಗಲು ಸಾಧುಸಂತರ ನೇತೃತ್ವದಲ್ಲಿ ನೂತನ ಸಂಘಟನೆಯನ್ನು ಹುಟ್ಟುಹಾಕಲು ಚಿಂತಿಸಲಾಗಿದೆ. ಅ.20 ರಂದು ಬಾಗಲಕೋಟೆಯಲ್ಲಿ ನಡೆಯುವ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹೇಳಿದರು.

ನಗರದ ಖಾಸಗಿ ಹೊಟೆಲ್ ನಲ್ಲಿ ವಿವಿಧ ಸಮಾಜದ ಮುಖಂಡರೊಂದಿಗೆ ಪೂರ್ವಭಾವಿ ಸಭೆ ನಡೆಸಿ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಡವರಿಗೆ ಹಿಂದೂಳಿದ ವರ್ಗದ ಜನರಿಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಹೊಸ ಸಂಘಟನೆ ಹುಟ್ಟುಹಾಕಲಾಗಿದೆ. ಈ ಸಭೆಯಲ್ಲಿ 25 ಕ್ಕೂ ಹೆಚ್ಚು ಸಾಧು-ಸಂತರು, ಸಾವಿರಕ್ಕೂ ಅಧಿಕ ವಿವಿಧ ಸಮಾಜದ ಮುಖಂಡರು ಪಾಲ್ಗೊಳ್ಳಲಿದ್ದಾರೆ ಎಂದರು.

ಕೂಡಲಸಂಗಮದ ಬಸವಜಯಮೃತ್ಯುಂಜಯ ಸ್ವಾಮೀಜಿ ಅವರು ಸಂಘಟನೆಗೆ ರಾಯಣ್ಣ, ಚೆನ್ನಮ್ಮ ಬ್ರಿಗೇಡ್ ಹೆಸರಿಡಲು ಸಲಹೆ ನೀಡಿದ್ದಾರೆ. ಈ ಕುರಿತು ಅಂದಿನ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ವಿಜಯೇಂದ್ರ ಎಳಸು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವಾಯ್.ವಿಜಯೇಂದ್ರ ರಾಜಕೀಯದಲ್ಲಿ ಇನ್ನು ಎಳಸು. ನಾವೆಲ್ಲರೂ ಪಕ್ಷವನ್ನು ಕಟ್ಟುವ ಸಂದರ್ಭದಲ್ಲಿ ವಿಜಯೇಂದ್ರ ಕಣ್ಣು ಬಿಟ್ಟಿದಿಲ್ಲ. ಬಿಜೆಪಿಯನ್ನು ಅನೇಕರು ಶ್ರಮವಹಿಸಿ ಕಟ್ಟಿದ ಮೇಲೆ ಮೋದಿ, ಅಮಿತ್ ಷಾ ಕೃಪಕಟಾಕ್ಷದಿಂದ, ಹೈಕಮಾಂಡ್ ಗೆ ಮಂಕುಬೂದಿ ಎರಚಿ ರಾಜ್ಯಾಧ್ಯಕ್ಷರಾಗಿದ್ದಾರೆ‌. ವಿಜಯೇಂದ್ರ ಕೈಯಲ್ಲಿ ಇದೀಗ ಪಕ್ಷ ಇವರ ಕೈಯಲ್ಲಿ ಸಿಕ್ಕು ಹಾಳಾಗುತ್ತಿದೆ ಎಂದು ಕಿಡಿಕಾರಿದರು.

ಸಿಎಂ ಸಿದ್ದರಾಮಯ್ಯ ಹಾಗೂ ಅವರ ಬೆಂಬಲಿಗರು ಮುಡಾ ಹಗರಣ ಮುಚ್ಚಿ ಹಾಕಲು ಜಾತಿಗಣತಿ ವಿಷಯವನ್ನು ಮುನ್ನೆಲೆಗೆ ತರುತ್ತಿದ್ದಾರೆ. ಈ ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದ ವೇಳೆ ಜಾತಿಗಣತಿ ವರದಿಯನ್ನು ಬಹಿರಂಗಪಡಿಸುವುದಾಗಿ ಹೇಳಿದ್ದರು. ಈ ಮಾತು ಹೇಳಿ ಎಂಟು ವರ್ಷ ಕಳೆದರೂ ಕಾರ್ಯರೂಪಕ್ಕೆ ಬಂದಿಲ್ಲ. ಇದೀಗ ಅಲುಗಾಡುತ್ತಿರುವ ಸಿಎಂ ಕುರ್ಚಿ ಉಳಿಸಿಕೊಳ್ಳಲು ತಮ್ಮ ಪಕ್ಷದ ಶಾಸಕರ, ಸಚಿವರ ಮೂಲಕ ಜಾತಿಗಣತಿ ವಿಷಯವನ್ನು ಮುನ್ನಲೆಗೆ ತರುತ್ತಿದ್ದಾರೆ ಎಂದು ಆರೋಪಿದರು.

 ವರದಿ:-  ಸುಧೀರ್ ಕುಲಕರ್ಣಿ 

 

WhatsApp Group Join Now
Telegram Group Join Now
Share This Article
error: Content is protected !!