Ad imageAd image

ಸಹಾಯಹಸ್ತ ಸೇವಾ ಟ್ರಸ್ಟ್ ,ಹನುಮಾನ್ ಜಯಂತಿ ,ಶ್ರೀರಾಮನವಮಿ ಆಚರಣೆ,ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜೀವ್ ಗೌಡರ ಪರ ಮನೆ ಮನೆಗೆ ಮತಯಾಚನೆ

Bharath Vaibhav
ಸಹಾಯಹಸ್ತ ಸೇವಾ ಟ್ರಸ್ಟ್ ,ಹನುಮಾನ್ ಜಯಂತಿ ,ಶ್ರೀರಾಮನವಮಿ ಆಚರಣೆ,ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜೀವ್ ಗೌಡರ ಪರ ಮನೆ ಮನೆಗೆ ಮತಯಾಚನೆ
WhatsApp Group Join Now
Telegram Group Join Now

ಬೆಂಗಳೂರು: –ಪೀಣ್ಯ,ದಾಸರಹಳ್ಳಿ ಅಭಿವೃದ್ಧಿಯಲ್ಲಿ ದೇಶದಲ್ಲಿ ಅಗ್ರ ಸ್ಥಾನದಲ್ಲಿರುವುದು ಕಾಂಗ್ರೆಸ್ ಮಾತ್ರ. ಧರ್ಮಸ್ಥಳದ ವೀರೇಂದ್ರ ಹೆಗಡೆಯವರೇ ಸಿದ್ದರಾಮಯ್ಯರನ್ನು ಅನ್ನರಾಮಯ್ಯ ಎಂದು ಕರೆದಿದ್ದಾರೆ ಎಂದರೆ ಕಾಂಗ್ರೆಸ್ ಪಕ್ಷದ ಕಾರ್ಯವೈಖರಿಯನ್ನು ಮತದಾರ ಪ್ರಭುಗಳು ಗಮನದಲ್ಲಿಟ್ಟುಕೊಂಡು ಮತ ಚಲಾಯಿಸಿ ರಾಜೀವ್ ಗೌಡರನ್ನು ಗೆಲ್ಲಿಸಿಕೊಂಡು ಬರಬೇಕು’, ಎಂದು ಮಾಜಿ ಸಚಿವರು ಹಾಗೂ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಎಂ ರೇವಣ್ಣ ಕಾರ್ಯಕರ್ತರಿಗೆ ಕರೆ ನೀಡಿದರು.

ರಾಜಗೋಪಾಲನಗರ ವಾರ್ಡ್ ನ ರಾಜೇಶ್ವರಿನಗರದ ಫ್ರೆಂಡ್ಸ್ ಸರ್ಕಲ್ ನಲ್ಲಿ ಐತಿಹಾಸಿಕ ಬೆಂಗಳೂರು ಕರಗ ಹಾಗೂ ಹನುಮ ಜಯಂತಿ ಪ್ರಯುಕ್ತ ಸಹಾಯಹಸ್ತ ಸೇವಾ ಟ್ರಸ್ಟ್ ನ ಸಂಸ್ಥಾಪಕ ಅಧ್ಯಕ್ಷ ಹಾಗೂ ಕಾಂಗ್ರೆಸ್ ನ ಪ್ರಭಾವಿ ಮುಖಂಡ ರುದ್ರೇಗೌಡ್ರು ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಶ್ರೀರಾಮ ನವಮಿ ಆಚರಣೆ ಹಾಗೂ ಬೆಂಗಳೂರು ಉತ್ತರ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜೀವ್ ಗೌಡರ ಪರ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಾಜಿ ಶಾಸಕ ಆರ್ ಮಂಜುನಾಥ್ ಮಾತನಾಡಿ, ‘ಬೂತ್ ಮಟ್ಟದಿಂದ ನಮ್ಮ ಕಾರ್ಯಕರ್ತರು ಅತ್ಯಂತ ನಿಷ್ಠೆಯಿಂದ ಕೆಲಸ ನಿರ್ವಹಿಸುತ್ತಿದ್ದಾರೆ. ಹಾಗೆಯೇ ರಾಜೀವ್ ಗೌಡರವರಿಗೆ ಕ್ಷೇತ್ರದಲ್ಲಿ ಜನ ತೋರಿಸುತ್ತಿರುವ ಪ್ರೀತಿ ನೋಡುತ್ತಿದ್ದರೆ ಅವರು ಜಯಭೇರಿ ಬಾರಿಸುವುದು ಗ್ಯಾರಂಟಿ’, ಎಂದು ಹೇಳಿದರು.

ಇದೇ ವೇಳೆ ಮಾತನಾಡಿದ ಮಾಜಿ ನಗರಸಭಾ ಅಧ್ಯಕ್ಷ ಕೆ ಸಿ ಅಶೋಕ್, ‘ಸತ್ಯ ಹಾಗೂ ಸುಳ್ಳಿನ ಮೇಲೆ ಈ ಚುನಾವಣೆ ನಡೆಯುತ್ತಿದೆ. ನುಡಿದಂತೆ ನಡೆದ ಕಾಂಗ್ರೆಸ್ ಬೇಕಾ ಅಥವಾ ಸುಳ್ಳನ್ನೇ ಬಂಡವಾಳ ಮಾಡಿಕೊಂಡಿರುವ ಬಿಜೆಪಿ ಬೇಕಾ ಅಂತ ಮತದಾರರು ತೀರ್ಮಾನಿಸಲಿದ್ದಾರೆ’, ಎಂದು ಹೇಳಿದರು.

ಇದೇ ವೇಳೆ ನೆರೆದಿದ್ದ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಾರ್ವಜನಿಕರಿಗೆ ಮಜ್ಜಿಗೆ, ಪಾನಕ, ಕೋಸಂಬರಿ ವಿತರಿಸಲಾಯಿತು. ನಂತರ ರಾಜೀವ್ ಗೌಡರ ಪರವಾಗಿ ಚುನಾವಣೆ ಪ್ರಚಾರ ಮಾಡಿ ಮತಯಾಚಿಸಲಾಯಿತು.ಈ ಸಂದರ್ಭದಲ್ಲಿ ಮಾಜಿ ನಗರಸಭಾ ಅಧ್ಯಕ್ಷ ಕೆ ಸಿ ಅಶೋಕ್, ಪೀಣ್ಯ ಕೈಗಾರಿಕಾ ಪ್ರದೇಶ ವಾರ್ಡಿನ ಕಾಂಗ್ರೆಸ್ ಅಧ್ಯಕ್ಷ ಗೋವಿಂದರಾಜು, ರಾಜಗೋಪಾಲನಗರ ವಾರ್ಡ್ ಅಧ್ಯಕ್ಷ ಜಗದೀಶ್ ಕುಮಾರ್,ಜಿ.ಎಸ್ ಕೃಷ್ಣಮೂರ್ತಿ, ಬಷೀರ್, ವೆಂಕಟೇಶ್, ನಂಜಪ್ಪ, ಮುನಿರಾಜು, ಮೋಹನ್ ಕುಮಾರ್, ಶ್ರೀಧರ್, ರೇಣುಕಾ ಪ್ರಸಾದ್, ಸೌಮ್ಯ, ಸಂತೋಷ್ ಸೇರಿದಂತೆ ಕಾಂಗ್ರೆಸ್ ಮುಖಂಡರು, ಮಹಿಳೆಯರು ಕಾರ್ಯಕರ್ತರು ಇದ್ದರು.

ವರದಿ:-ಅಯ್ಯಣ್ಣ ಮಾಸ್ಟರ್

WhatsApp Group Join Now
Telegram Group Join Now
Share This Article
error: Content is protected !!