ಬೆಂಗಳೂರು : ಸ್ಯಾಂಡಲ್ ವುಡ್ ನಟ ಚೇತನ್ ಚಂದ್ರ ಮೇಲೆ ಅಪರಿಚಿತ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ತಡರಾತ್ರಿ ಕಗ್ಗಲಿಪುರದ ಬಳಿ ನಡೆದಿದೆ.
ಬೈಕ್‍ನಲ್ಲಿ ಹಿಂಬಾಲಿಸಿಕೊಂಡು ಬಂದ ಕೆಲ ಕಿಡಿಗೇಡಿಗಳು, ಬೈಕ್‍ಗೆ ಟಚ್ ಮಾಡಿದ್ದೀರಿ ಎಂದು ಗಲಾಟೆ ಶುರುಮಾಡಿದ್ದಾರೆ.
ಬಳಿಕ ನಟ ಚೇತನ್ ಚಂದ್ರ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ. ಹಲ್ಲೆಯಿಂದ ಮೂಗಿಗೆ ಗಾಯವಾಗಿದ್ದು, ತೀವ್ರ ರಕ್ತಸ್ರಾವವಾಗಿದೆ ಎಂದು ತಿಳಿದುಬಂದಿದೆ.
ಕಾರಿನಲ್ಲಿ ಚಲಿಸುವಾಗ ಮಾತಿಗೆ ಮಾತು ಬೆಳೆದು ಜಗಳವಾಗಿದೆ. ಈ ವೇಳೆ 20 ಮಂದಿ ನಟನ ಮೇಲೆ ಹಲ್ಲೆ ಮಾಡಿದ್ದು, ಚೇತನ್ ಚಂದ್ರಗೆ ರಕ್ತ ಬರುವಂತೆ ಥಳಿಸಿದ್ದಾರೆ. ಈ ಸಂಬಂಧ ಅವರು ಕಗ್ಗಲಿಪುರ ಪೊಲೀಸ್ ಠಾಣೆಗೆ ದೂರು ದಾಖಲಿಸಲು ತೆರಳಿದ್ದಾರೆ. ದೇವಸ್ಥಾನಕ್ಕೆ ಹೋಗಿ ಬರುವ ವೇಳೆ ಈ ಘಟನೆ ನಡೆದಿದೆ. ಈ ಬಗ್ಗೆ ನಟ ಇನ್ಸ್ಟಾಗ್ರಾಂನಲ್ಲಿ ಅವರು ಮಾಹಿತಿ ಹಂಚಿಕೊಂಡಿದ್ದಾರೆ.