Ad imageAd image

ಸ್ಯಾಂಡಲ್ ವುಡ್ ಖಳನಟ ಹರೀಶ್ ರಾಯ್ ಇನ್ನಿಲ್ಲ 

Bharath Vaibhav
ಸ್ಯಾಂಡಲ್ ವುಡ್ ಖಳನಟ ಹರೀಶ್ ರಾಯ್ ಇನ್ನಿಲ್ಲ 
WhatsApp Group Join Now
Telegram Group Join Now

ಬೆಂಗಳೂರು : ಸ್ಯಾಂಡಲ್ ವುಡ್ ಖಳನಟ ಹರೀಶ್ ರಾಯ್ (55) ನಿಧನರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಕ್ಯಾನ್ಸರ್ ಖಾಯಿಲೆಗೆ ತುತ್ತಾಗಿದ್ದ ಖಳನಟ ಹರೀಶ್ ರಾಯ್ ನಿಧನರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ..ಚಿಕಿತ್ಸೆಗಾಗಿ ಅವರು ಕಿದ್ವಾಯಿ ಆಸ್ಪತ್ರೆಗೆ ದಾಖಲಾಗಿದ್ದರು.ಆದರೆ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಕನ್ನಡ ಚಿತ್ರರಂಗದ ಖ್ಯಾತ ಖಳನಟ ಹರೀಶ್ ರಾಯ್. ಸುಮಾರು ಎರಡು ದಶಕಗಳಿಂದ ಚಿತ್ರರಂಗದಲ್ಲಿರುವ ಇವರು ಕನ್ನಡ ಮಾತ್ರವಲ್ಲದೆ, ತಮಿಳು ಚಿತ್ರಗಳಲ್ಲಿಯೂ ನಟಿಸಿದ್ದಾರೆ.

ಶಿವರಾಜ್ ಕುಮಾರ್ ಅಭಿನಯದ ‘ಓಂ’ ಚಿತ್ರದಲ್ಲಿನ ‘ರಾಯ್’ ಪಾತ್ರದಿಂದ ಗಮನ ಸೆಳೆದ ಇವರು, ಸಾಕಷ್ಟು ಚಿತ್ರಗಳಲ್ಲಿ ಖಳನಟನಾಗಿ, ಪೋಷಕ ನಟನಾಗಿ ಕಾರ್ಯ ನಿರ್ವಹಿಸಿದ್ದಾರೆ.

ಬೆಂಗಳೂರು ಅಂಡರ್ ವರ್ಲ್ಡ್, ಸಂಜು ವೆಡ್ಸ್ ಗೀತಾ, ಸ್ವಯಂವರ, ಭೂಗತ, ನನ್ನ ಕನಸಿನ ಹೂವೆ, ನಲ್ಲ, ಜಾಫರ್ ಅಲಿಯಾಸ್ ಮುರ್ಗಿ ಜಾಫರ್, ಜೋಡಿ ಹಕ್ಕಿ, ತಾಯವ್ವ, ಓಂ ಹಾಗೂ ಸ್ಯಾಂಡಲ್ವುಡ್ನ ಟಾಪ್ ಸಿನಿಮಾ ಕೆಜಿಎಫ್ ಚಾಪ್ಟರ್ ೧ ಹಾಗೂ ಕೆಜಿಎಫ್ ಚಾಪ್ಟರ್ ೨ರಲ್ಲಿ ಅಭಿನಯಿಸಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!