ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ (RBI) ಯ 26 ನೇ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ಅವರನ್ನು ಭಾರತ ಸರ್ಕಾರ ನೇಮಿಸಿದೆ.
ರಾಜಸ್ಥಾನ ಕೇಡರ್‌ನ 1990ರ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿರುವ ಮಲ್ಹೋತ್ರಾ ಅವರು ಪ್ರಸ್ತುತ ಕಂದಾಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.ಸದ್ಯ ಇವರು ಶಕ್ತಿಕಾಂತ ದಾಸ್ ಅವರಿಂದ ಆರ್‌ಬಿಐ ಗವರ್ನರ್ ಆಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಡಿ. 10 ರಂದು ಶಕ್ತಿಕಾಂತ ದಾಸ್ ಅವರ ಅಧಿಕಾರಾವಧಿ ಕೊನೆಗೊಳ್ಳಲಿದೆ. ಕ್ಯಾಬಿನೆಟ್‌ನ ನೇಮಕಾತಿ ಸಮಿತಿಯು ಮಲ್ಹೋತ್ರಾ ಅವರನ್ನು ಮೂರು ವರ್ಷಗಳ ಅವಧಿಗೆ ಆರ್‌ಬಿಐನ ಮುಂದಿನ ಗವರ್ನರ್ ಎಂದು ಹೆಸರಿಸಿದ್ದು, ಡಿ. 11 ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಮಲ್ಹೋತ್ರಾ ಅವರು ಹಣಕಾಸು, ತೆರಿಗೆ ಮತ್ತು ಆಡಳಿತದಂತಹ ಕ್ಷೇತ್ರಗಳಲ್ಲಿ 33 ವರ್ಷಗಳ ಅನುಭವ ಹೊಂದಿದ್ದಾರೆ. ಈ ಹಿಂದೆ ಕಂದಾಯ ಕಾರ್ಯದರ್ಶಿ ಮತ್ತು ಹಣಕಾಸು ಸೇವೆಗಳ ಇಲಾಖೆಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಹಣಕಾಸು ಸುಧಾರಣೆಗಳು, ಬ್ಯಾಂಕಿಂಗ್ ವಲಯವನ್ನು ಬಲಪಡಿಸುವುದು ಮತ್ತು ತೆರಿಗೆ ಬೆಳವಣಿಗೆಗೆ ಚಾಲನೆ ನೀಡುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದವರಾಗಿದ್ದಾರೆ.