Join The Telegram | Join The WhatsApp |
ಮೈಸೂರು: ವಿವಿಧ ಪ್ರಕರಣದಲ್ಲಿ ಭಾಗಿಯಾಗಿದ್ದಂತ ಸ್ಯಾಂಟ್ರೋ ರವಿಯನ್ನು ಗುಜರಾತ್ ನಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಗುಜರಾತ್ ನಲ್ಲಿ ತಲೆಮರೆಸಿಕೊಂಡಿದ್ದ ಸ್ಯಾಂಟ್ರೋ ರವಿಯನ್ನು 11 ದಿನಗಳ ಬಳಿಕ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ವಂಚನೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಪೊಲೀಸರು ನಿನ್ನೆ ರಾಮನಗರದಲ್ಲಿ ಸ್ಯಾಂಟ್ರೋ ರವಿ ಕಾರು ಚಾಲಕನನ್ನು ವಶಕ್ಕೆ ಪಡೆದಿದ್ದರು. ರಾಮನಗರದಲ್ಲಿ ಎಸ್ ಪಿ ಸಂತೋಷ್ ಬಾಬು ನೇತೃತ್ವದ ತಂಡದಿಂದ ಸ್ಯಾಂಟ್ರೋ ರವಿ ಕಾರು ಚಾಲಕ ಗಿರೀಶ್ ನನ್ನು ವಶಕ್ಕೆ ಪಡೆಯಲಾಗಿತ್ತು.
ರಾಮನಗರದಲ್ಲಿ ಸ್ಯಾಂಟ್ರೋ ರವಿ 2 ದಿನಗಳ ಕಾಲ ತಲೆಮರೆಸಿಕೊಂಡಿದ್ದ ಎನ್ನುವ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ಮೈಸೂರಿನಿಂದ ಬಂದಿದ್ದ ಪೊಲೀಸರು ರಾಮನಗರ ಪೊಲೀಸರ ಸಹಾಯದಿಂದ ರವಿ ಕಾರು ಚಾಲಕ ಗಿರೀಶ್ ನನ್ನು ವಶಕ್ಕೆ ಪಡೆದಿದ್ದರು.
ಇದೀಗ ಗುಜರಾತ್ ನಲ್ಲಿ ತಲೆಮರೆಸಿಕೊಂಡಿದ್ದ ಸ್ಯಾಂಟ್ರೋ ರವಿಯನ್ನು 11 ದಿನಗಳ ಬಳಿಕ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಕೆ ಎಸ್ ಮಂಜುನಾಥ್ ಆಲಿಯಾಸ್ ಸ್ಯಾಂಟ್ರೋ ರವಿ ವಿರುದ್ಧ ವಂಚನೆ, ವರದಕ್ಷಿಣೆ ಕಿರುಕುಳ, ಅತ್ಯಾಚಾರ ಹಾಗೂ ಜಾತಿನಿಂದನೆಯಡಿ ಜನವರಿ 2ರಂದು ಪ್ರಕರಣ ದಾಖಲಾಗಿತ್ತು.
ಪ್ರಕರಣ ದಾಖಲಾಗುತ್ತಿದ್ದಂತೆ ಸ್ಯಾಂಟ್ರೋ ರವಿ ಅವರು, ತಲೆಮರೆಸಿಕೊಂಡಿದ್ದು, ಬಂಧನ ಭೀತಿ ಶುರುವಾಗಿತ್ತು.ಈ ಹಿನ್ನೆಲೆಯಲ್ಲಿ ಅವರು ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಲ್ಯಾಪ್ಟಾಪ್ಗಾಗಿ ತನ್ನ ಪತ್ನಿ ವಿರುದ್ಧ ಷಡ್ಯಂತ ರೂಪಿಸಿ ನಕಲಿ ಪ್ರಕರಣ ದಾಖಲಿಸಿ ತನ್ನ ಪತ್ನಿ ಸೇರಿದಂತೆ ಮೂವರನ್ನು ಜೈಲು ಸೇರಿಸಿದ್ದನು.ಈತನ ಬಂಧನಕ್ಕೆ 11 ವಿಶೇಷ ಪೊಲೀಸರ ತಂಡ ರಚಿಸಲಾಗಿತ್ತು.
Join The Telegram | Join The WhatsApp |